/newsfirstlive-kannada/media/post_attachments/wp-content/uploads/2024/05/RCB-48.jpg)
ಇಂದು ಬೆಂಗಳೂರಿನಲ್ಲಿ CSK vs RCB ಹೈ ವೋಲ್ಟೇಜ್ ಪಂದ್ಯ ನಡೆಯಲಿಕ್ಕಿದ್ದು, ಪಂದ್ಯಕ್ಕಾಗಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಪಂದ್ಯಕ್ಕಾಗಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. 3 DCP, 20 ACP, 50 ಇನ್ಸ್​​ಸ್ಪೆಕ್ಟರ್ ಸೇರಿ 1 ಸಾವಿರ ಸಿವಿಲ್ ಪೊಲೀಸರ ನಿಯೋಜನೆ ಮಾಡಲಾಗಿದೆ. 1 ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, 2 ಟ್ರಾಫಿಕ್ ಡಿಸಿಪಿ ಸೇರಿ 200 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸಂಚಾರ ಪಥದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಹಾಗಾಗಿ ಪಂದ್ಯ ವೀಕ್ಷಣೆಗೆ ಬರುವವರು ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ಮಾತ್ರವಲ್ಲದೆ ಕೆಲವೆಡೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
/newsfirstlive-kannada/media/post_attachments/wp-content/uploads/2023/10/BNG_CHINNASWAMY_STADIUM.jpg)
ವಾಹನ ನಿಲುಗಡೆ ನಿಷೇಧ ರಸ್ತೆಗಳು
ಕ್ವೀನ್ಸ್ ರಸ್ತೆ, ಎಂ ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್​ ಜಾನ್ಸ್​ ಸ್ವ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ಬೀದಿ, ಟ್ರಿನಿಟಿ ವೃತ್ತ, ಲ್ಯಾವೆಲ್ಲಿ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ವಾಹನ ನಿಲ್ಲಿಸುವಂತಿಲ್ಲ.
ಸಾರ್ವಜನಿಕ ನಿಲುಗಡೆ ಪ್ರದೇಶ
ಸೆಂಟ್ ಜೋಸೆಫ್ ಇಂಡಿಯನ್ ಹೈ ಸ್ಕೂಲ್ ಮೈದಾನ, ಯು ಬಿ ಸಿಟಿ ಪಾರ್ಕಿಂಗ್ ಸ್ಥಳ, ಕಿಂಗ್ಸ್ ರಸ್ತೆ ಕಬ್ಬನ್ ಪಾರ್ಕ್ ಒಳಗೆ, ಶಿವಾಜಿನಗರ ಬಸ್ಸ್ ನಿಲ್ದಾಣ ಮೊದಲನೇ ಮಹಡಿ, ಓಲಾ, ಉಬರ್ ಗೆ ಪ್ರತ್ಯೇಕ ಪಿಕ್ ಆಪ್ & ಡ್ರಾಪ್ ಪಾಯಿಂಟ್ ಗಳ ವ್ಯವಸ್ಥೆ ಮಾಡಲಾಗಿದೆ.
/newsfirstlive-kannada/media/post_attachments/wp-content/uploads/2024/03/Traffi-Zam.jpg)
ಕ್ರೀಡಾಂಗಣ ಸುತ್ತಮುತ್ತ ಪಾರ್ಕಿಂಗ್ ನಿಷೇಧ
ಕ್ರೀಡಾಂಗಣ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ.
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ಬೀದಿ, ಟ್ರಿನಿಟಿ ಸರ್ಕಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ
ಇನ್ನು ಮ್ಯಾಚ್ ನೋಡಲು ಆಗಮಿಸುವ ಸಾರ್ವಜನಿಕರಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯೂ ಬಿ ಸಿಟಿ ಪಾರ್ಕಿಂಗ್ ಸ್ಥಳ, ಕಿಂಗ್ಸ್ ರಸ್ತೆ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಒಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಹೈವೋಲ್ಟೇಜ್​ ಪಂದ್ಯ ನಡೆಯಲಿಕ್ಕಿದೆ. ಈ ದೃಷ್ಟಿಯಲ್ಲಿ ಬೆಂಗಳೂರು ಪೊಲೀಸರಿಂದ ಮಹಾನಗರದಲ್ಲಿ ಸುಗಮ ಸಂಚಾರಕ್ಕಾಗಿ ವ್ಯವಸ್ಥೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us