Advertisment

ಬಿಜೆಪಿ-ಜೆಡಿಎಸ್‌ ಸೀಟು ಹಂಚಿಕೆಗೆ ಕ್ಲೈಮ್ಯಾಕ್ಸ್‌.. ದಳಪತಿಗಳ ಜೊತೆ ಹೆಚ್‌ಡಿಕೆ ಮಹತ್ವದ ಸಭೆ; ಪ್ಲಾನ್ ಏನು?

author-image
admin
Updated On
ಬಿಜೆಪಿ-ಜೆಡಿಎಸ್‌ ಸೀಟು ಹಂಚಿಕೆಗೆ ಕ್ಲೈಮ್ಯಾಕ್ಸ್‌.. ದಳಪತಿಗಳ ಜೊತೆ ಹೆಚ್‌ಡಿಕೆ ಮಹತ್ವದ ಸಭೆ; ಪ್ಲಾನ್ ಏನು?
Advertisment
  • ರಾಮನಗರ ಕ್ಷೇತ್ರದ JDS ಪ್ರಮುಖ ಮುಖಂಡರ ಜೊತೆ HDK ಸಭೆ
  • ನಾಳೆ ದೆಹಲಿಗೆ ತೆರಳಿ ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಬಗ್ಗೆ ಚರ್ಚೆ
  • ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಜೊತೆ ಮಹತ್ವದ ಮಾತುಕತೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ತಂತ್ರಗಾರಿಕೆಯ ಮಧ್ಯೆ ಜೆಡಿಎಸ್‌ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ. ಇಂದು ಅಥವಾ ನಾಳೆ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಹೀಗಾಗಿ ಜೆಡಿಎಸ್ ಪಾಳಯದಲ್ಲೂ ರಾಜಕೀಯ ಚಟುವಟಿಕೆ ಜೋರಾಗಿದೆ.

Advertisment

ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆಯ ಮಾತುಕತೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಸಭೆ ನಡೆಸಿದ್ದಾರೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.

ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸದಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭೆ ಕ್ಷೇತ್ರದ ಪ್ರಮುಖ ಮುಖಂಡರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾಜಿ ಶಾಸಕರು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಎ.ಮಂಜುನಾಥ್ ಸೇರಿದಂತೆ ಕ್ಷೇತ್ರದ ಅನೇಕ ಪ್ರಮುಖ ಮುಖಂಡರು ಭಾಗಿಯಾಗಿದ್ದರು.

publive-image

ಬಿಜೆಪಿ ಮೂಲಗಳ ಪ್ರಕಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿ.ಎನ್ ಮಂಜುನಾಥ್ ಅವರಿಗೆ ಈ ಬಾರಿ ಟಿಕೆಟ್ ನೀಡುವ ಸಾಧ್ಯತೆ ಇದೆ. ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ರೆ ರಾಮನಗರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆಯನ್ನು ಹೇಗೆ ಎದುರಿಸಬೇಕು ಅನ್ನೋ ಚರ್ಚೆ ನಡೆಸಲಾಗಿದೆ.

Advertisment

ಇದನ್ನೂ ಓದಿ: ಡಾ.ಸಿ.ಎನ್ ಮಂಜುನಾಥ್‌ಗೆ ಬಿಜೆಪಿ ಟಿಕೆಟ್​ ಫಿಕ್ಸ್​​; ಹೈಕಮಾಂಡ್‌ ಲೆಕ್ಕಾಚಾರ ಏನು?

ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಘೋಷಣೆ ಆಗುತ್ತಿರುವ ಸಂದರ್ಭದಲ್ಲಿ ಜೆಡಿಎಸ್, ಬಿಜೆಪಿ ಸೀಟು ಹಂಚಿಕೆ ಇನ್ನೂ ಅಂತಿಮವಾಗಿದೆ. ಮೈತ್ರಿ ಸೀಟು ಹಂಚಿಕೆ ಹಾಗೂ ಅಭ್ಯರ್ಥಿ ಆಯ್ಕೆ ಫೈನಲ್ ಮಾಡುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಳೆ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ದೆಹಲಿಯಲ್ಲಿ ಹೆಚ್‌ಡಿಕೆ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿಶ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment