newsfirstkannada.com

ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ.. ಬೈಕ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣ ಸೀಜ್‌!

Share :

Published April 9, 2024 at 1:15pm

    ಎಲೆಕ್ಷನ್ ಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ

    ಬೈಕ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣ ವಶ

    ಹೊಸೂರಿನಿಂದ ಕರ್ನೂಲ್‌ ಮಾರ್ಗವಾಗಿ ಹೋಗುತ್ತಿದ್ದ ಬೈಕ್ ಸವಾರ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲೆಕ್ಷನ್ ಫ್ಲೈಯಿಂಗ್ ಸ್ಕ್ವಾಡ್‌ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಹೊಸೂರು, ಕರ್ನೂರು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆಯಲಾಗಿದೆ.

ಹೊಸೂರು ಪಕ್ಕದ ಕರ್ನೂರು ಚೆಕ್‌ಪೋಸ್ಟ್‌ ಬಳಿ ಸೂಕ್ತ ದಾಖಲೆಗಳಿಲ್ಲದೆ 25 ಲಕ್ಷ ರೂಪಾಯಿ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಕೃಷ್ಣಗಿರಿ ಜಿಲ್ಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ PSI ಜಗದೀಶ್ ಬರ್ಬರ ಹತ್ಯೆ ಕೇಸ್; ಅಪರಾಧಿಗೆ ಜೀವಾವಧಿ ಶಿಕ್ಷೆ

ಹೊಸೂರಿನಿಂದ ಕರ್ನೂಲ್‌ ಮಾರ್ಗವಾಗಿ ದ್ವಿಚಕ್ರ ವಾಹನದಲ್ಲಿ ಈ ಹಣವನ್ನು ಸಾಗಿಸಲಾಗುತ್ತಾ ಇತ್ತು. ಬೈಕ್ ತಡೆದು ತಪಾಸಣೆ ನಡೆಸಿದಾಗ ಬ್ಯಾಗ್‌ನಲ್ಲಿ 25 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಹಣಕ್ಕೆ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ರಾಜೇಂದ್ರನ್ ಎಂಬುವವರಿಂದ ಅಧಿಕಾರಿಗಳು ಹಣ ವಶಕ್ಕೆ ಪಡೆದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ.. ಬೈಕ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಹಣ ಸೀಜ್‌!

https://newsfirstlive.com/wp-content/uploads/2024/04/Election-Case-Sieze.jpg

Load More