/newsfirstlive-kannada/media/post_attachments/wp-content/uploads/2025/06/PAKISTAN_CAR.jpg)
ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ವಾಹನದಲ್ಲಿ ತಂದು ಸ್ಫೋಟಿಸಿದ್ದರಿಂದ 16 ಸೈನಿಕರು ಜೀವ ಕಳೆದುಕೊಂಡಿದ್ದಾರೆ. 25ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಖೈಬರ್​ ಪಖ್ತುಂಖ್ವಾದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹುತಿ ಬಾಂಬರ್ ವ್ಯಕ್ತಿಯು ಭಾರೀ ಮಟ್ಟದ ಸ್ಫೋಟಕಗಳನ್ನು ತುಂಬಿದ ವಾಹನವನ್ನು ಪಾಕಿಸ್ತಾನದ ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕ್ಷಣದಲ್ಲಿ ದೊಡ್ಡ ಮಟ್ಟದಲ್ಲಿ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನದ 16 ಸೈನಿಕರು ಉಸಿರು ಚೆಲ್ಲಿದ್ದಾರೆ. ಜೊತೆಗೆ 10 ಸೈನಿಕರು ಹಾಗೂ 19 ಸ್ಥಳೀಯ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
/newsfirstlive-kannada/media/post_attachments/wp-content/uploads/2025/06/PAKISTAN_CAR_1.jpg)
ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿದ್ದರಿಂದ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಎರಡು ಮನೆಗಳ ಛಾವಣಿ ಕುಸಿದು ಬಿದ್ದಿವೆ. ಮನೆಯೊಳಗಿದ್ದ 6 ಮಕ್ಕಳು ಕೂಡ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ತಾಲಿಬಾನ್‌ನ ಒಂದು ಬಣವಾಗಿರುವ ಹಫೀಜ್ ಗುಲ್ ಬಹದ್ದೂರ್ ಆರ್ಮಡ್​ ಗ್ರೂಪ್​ ಹೊತ್ತುಕೊಂಡಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
 Follow Us
 Follow Us
                                    


