newsfirstkannada.com

Karnataka budget: ಮದ್ಯಪ್ರಿಯರ ಜೇಬಿಗೆ ಕತ್ತರಿ; ಬಜೆಟ್‌ನಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

Share :

Published July 7, 2023 at 12:31pm

Update July 7, 2023 at 12:36pm

  ರಾಜ್ಯದಲ್ಲಿ ಬಿಯರ್ ರೇಟ್ ಮತ್ತಷ್ಟು ತುಟ್ಟಿ ಗ್ಯಾರಂಟಿ

  ಸಿದ್ದರಾಮಯ್ಯ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಬಿಗ್‌ ಶಾಕ್

  ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಳ

ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 2023-24ನೇ ಸಾಲಿನ ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಡಲಾಗಿದೆ. ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂಪಾಯಿಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Karnataka budget: 30 ಸಾವಿರ ಕೋಟಿಯಲ್ಲಿ ಮೆಟ್ರೋ, ಸಬರ್ಬನ್ ರೈಲು ಜಾರಿ #LiveUpdates

ಅಬಕಾರಿ ಸುಂಕದ ದರಗಳನ್ನು ಶೇಕಡಾ 20ರಷ್ಟು ಹೆಚ್ಚಿಸುವ ಜೊತೆಗೆ ಬಿಯರ್ ಮೇಲಿನ ಹೆಚ್ಚುವರಿ ಸುಂಕವನ್ನು ಶೇಕಡಾ 175 ರಿಂದ ಶೇಕಡಾ 185ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ಸುಂಕದ ದರಗಳು ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ ಎಂದು ಹೇಳಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Karnataka budget: ಮದ್ಯಪ್ರಿಯರ ಜೇಬಿಗೆ ಕತ್ತರಿ; ಬಜೆಟ್‌ನಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ

https://newsfirstlive.com/wp-content/uploads/2023/06/COOL_DRINKS_2.jpg

Load More