ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗದಿದ್ದರೆ.. ಭಾರತದ ಪಂದ್ಯಗಳು ಈ ದೇಶದಲ್ಲಿ ನಡೆಯಲಿವೆ..

author-image
Ganesh
Updated On
ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗದಿದ್ದರೆ.. ಭಾರತದ ಪಂದ್ಯಗಳು ಈ ದೇಶದಲ್ಲಿ ನಡೆಯಲಿವೆ..
Advertisment
  • ಪಿಸಿಬಿ ನೀಡಿರುವ ವೇಳಾಪಟ್ಟಿಗೆ ಐಸಿಸಿ ಓಕೆ ಎಂದಿದೆ
  • ಟೀಂ ಇಂಡಿಯಾ ಪಾಕ್​​​ಗೆ ಹೋಗುವ ಯಾವುದೇ ನಿರ್ಧಾರ ಇಲ್ಲ
  • ಫೆಬ್ರವರಿಯಿಂದ ಚಾಂಪಿಯನ್ಸ್​ ಟ್ರೋಫಿ ಪಂದ್ಯ ನಡೆಯಲಿದೆ

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಕಳುಹಿಸಿದ್ದ ಚಾಂಪಿಯನ್ಸ್ ಟ್ರೋಫಿಯ ವೇಳಾಪಟ್ಟಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಓಕೆ ಎಂದಿದೆ. ಆದರೆ ಬಿಸಿಸಿಐ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ, ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗದಿದ್ದರೆ ಶ್ರೀಲಂಕಾದಲ್ಲಿ ಭಾರತದ ಎಲ್ಲಾ ಪಂದ್ಯಗಳು ನಡೆಯಲಿದೆ ಎನ್ನಲಾಗಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವ ಬಗ್ಗೆ ಬಿಸಿಸಿಐ ಅಥವಾ ಭಾರತ ಸರ್ಕಾರ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವ ನಿರ್ಧಾರ ಭಾರತ ಸರ್ಕಾರದ ಕೈಯಲ್ಲಿದೆ ಎಂದು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ:ಮಳೆಯ ರಣಾರ್ಭಟ.. ಇಂದು ಈ 5 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

publive-image

ಒಂದು ವೇಳೆ ಭಾರತ ತಂಡವು ಪಾಕಿಸ್ತಾನಕ್ಕೆ ಹೋಗದಿರಲು ನಿರ್ಧರಿಸಿದರೆ, ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಐಸಿಸಿ ವೇಳಾಪಟ್ಟಿಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ A ಗುಂಪಿನಲ್ಲಿದೆ. ಆತಿಥೇಯ ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಎ ಗುಂಪಿನಲ್ಲಿವೆ.

ಸದ್ಯದ ವೇಳಾಪಟ್ಟಿ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯಲಿವೆ. ಈ ಹಿಂದೆಯೂ ಪಾಕಿಸ್ತಾನಕ್ಕೆ ತೆರಳುವ ವಿಚಾರದಲ್ಲಿ ವಿವಾದ ಉಂಟಾಗಿತ್ತು. ಇದಕ್ಕೂ ಮೊದಲು 2023ರ ಏಷ್ಯಾಕಪ್‌ಗೆ ಪಾಕಿಸ್ತಾನ ಆತಿಥ್ಯ ವಹಿಸಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment