/newsfirstlive-kannada/media/post_attachments/wp-content/uploads/2025/01/ROHIT.jpg)
2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಟೀಮ್ ಇಂಡಿಯಾದ ಆಟಗಾರರ ಹೆಸರನ್ನು ಘೋಷಣೆ ಮಾಡಲಾಗಿದೆ. ನ್ಯೂಜಿಲ್ಯಾಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸೋಲಿನ ಬಳಿಕ ಬಿಸಿಸಿಐ ಸಾಕಷ್ಟು ಅಳೆದು ತೂಗಿ ಚಾಂಪಿಯನ್ಸ್ ಟ್ರೋಫಿಗೆ ಆಟಗಾರರ ಹೆಸರನ್ನು ಅಂತಿಮಗೊಳಸಿದೆ.
ಮುಂದಿನ ತಿಂಗಳು ಅಂದರೆ ಫೆಬ್ರವರಿ 19 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಮುಂಬೈನ ಬಿಸಿಸಿಐ ಮುಖ್ಯ ಕಚೇರಿಯಿಂದ ಸೆಲೆಕ್ಷನ್ ಕಮಿಟಿ ಸಭೆ ನಡೆಸಿತು. ಬಳಿಕ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಕ್ಯಾಪ್ಟನ್ ರೋಹಿತ್ ಶರ್ಮಾ ಇಬ್ಬರು ತಂಡದ ಆಟಗಾರರ ಹೆಸರನ್ನು ಪ್ರಕಟ ಮಾಡಿದ್ದಾರೆ.
ರೋಹಿತ್ ಶರ್ಮಾ ಎಂದಿನಂತೆ ನಾಯಕ ಸ್ಥಾನದಲ್ಲಿದ್ದರೇ ಶುಭ್ಮನ್ ಗಿಲ್ ಅವರಿಗೆ ಉಪನಾಯಕನ ಸ್ಥಾನ ನೀಡಲಾಗಿದೆ. ವಿರಾಟ್ ಕೊಹ್ಲಿ ಅವರು ಎಂದಿನಂತೆ ಮಿಡಲ್ ಆರ್ಡರ್ನಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ವಿಕೆಟ್ ಕೀಪರ್ ಆಗಿ ಕನ್ನಡಿಗ ಕೆ.ಎಲ್ ರಾಹುಲ್, ಯುವ ಪ್ಲೇಯರ್ ರಿಷಬ್ ಪಂತ್ ಇದ್ದಾರೆ. ಪೇಸ್ ಬೌಲರ್ ಮೊಹಮ್ಮದ್ ಶಮಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ಅವರು ಟೀಮ್ಗೆ ಕಮ್ಬ್ಯಾಕ್ ಮಾಡಿದ್ದಾರೆ.
ಇದನ್ನೂ ಓದಿ:ಫೈನಲ್ನಲ್ಲಿ ಕರ್ನಾಟಕ V/S ಕನ್ನಡಿಗ ಫೈಟ್.. ಟ್ರೋಫಿಗೆ ಮುತ್ತಿಕ್ಕುವುದು ಯಾವ ರಾಜ್ಯ?
ಜಸ್ಪ್ರಿತ್ ಬೂಮ್ರಾ ಅವರಿಗೆ ಇಂಜುರಿಯಿಂದ ವಿಶ್ರಾಂತಿ ಕೊಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮತ್ತೆ ಅವಕಾಶ ಕೊಡಲಾಗಿದೆ. ಇನ್ನು ಭಾರತ ತಂಡದಲ್ಲಿ ವಾಷಿಂಗ್ಟನ್ ಸುಂದರ್ ಜೊತೆಗೆ ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಹಾರ್ದಿಕ್ ಪಾಂಡ್ಯ ಸೇರಿ ನಾಲ್ವರು ತಂಡದಲ್ಲಿ ಆಲ್ರೌಂಡರ್ ಆಗಿ ಇರಲಿದ್ದಾರೆ. ಆದರೆ ಪಂದ್ಯದ ವೇಳೆ ಯಾರಿಗೆ ಚಾನ್ಸ್ ಸಿಗುತ್ತದೆ ಎಂದು ಕಾದಯ ನೋಡಬೇಕು. ಈ ಬಾರಿ ಟೂರ್ನಿಯಲ್ಲಿ ಪಾಕಿಸ್ತಾನ ಸೇರಿ ಒಟ್ಟು 8 ತಂಡಗಳು ಕಣಕ್ಕಿಳಿಯುತ್ತಿದ್ದು, ಇದಕ್ಕಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಇದರ ಜೊತೆಗೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೂ ಭಾರತ ತಂಡವನ್ನು ಹೆಸರಿಸಲಾಗಿದೆ.
ಚಾಂಪಿಯನ್ ಟ್ರೋಫಿಗಾಗಿ ಟೀಮ್ ಇಂಡಿಯಾ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ