/newsfirstlive-kannada/media/post_attachments/wp-content/uploads/2025/01/SEEMA-HAIDER-1.jpg)
ಸೀಮಾ ಹೈದರ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ಪಬ್ಜೀ ಪ್ರಿಯಕರ ಸಚಿನ್ ಪ್ರೀತಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಬಂದಿದ್ದ ಸೀಮಾ ಹೈದರ್ ಸಾಕಷ್ಟು ಸುದ್ದಿಯಾದವರು. ಈಗಂತೂ ಸೀಮಾ ಹೈದರ್ ಬಗ್ಗೆ ಸದಾ ಒಂದಲ್ಲಾ ಒಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ.
ಇದನ್ನೂ ಓದಿ: ಪಾಕಿಸ್ತಾನಿ ಸೀಮಾ ಹೈದರ್ ಮನೆಗೆ ಹೊಸ ಅತಿಥಿ ಆಗಮನ; ಸಚಿನ್ ಫುಲ್ ಖುಷ್
ಆದ್ರೆ ಇದೀಗ ಸೀಮಾ ಹೈದರ್ಗೆ ಸಂಕಷ್ಟ ಎದುರಾಗಿದೆ. 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತದಲ್ಲಿರೋ ಎಲ್ಲಾ ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳ ಒಳಗೆ ದೇಶವನ್ನು ತೊರೆಯುವಂತೆ ಆದೇಶಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನದಿಂದ ಸಚಿನ್ ಜೊತೆಗೆ ವಾಸಿಸಲು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ಬಗ್ಗೆ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ.
ನಿನ್ನೆ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಕಿಸ್ತಾನದ ವಿರುದ್ಧ 5 ಪ್ರಮುಖ ನಿರ್ಣಯಗಳನ್ನ ಕೈಗೊಂಡಿದೆ. ಅದರಲ್ಲಿ ಪಾಕಿಸ್ತಾನಕ್ಕೆ ಹೋಗಿರುವವರು ಮೇ.1ರ ಒಳಗಾಗಿ ಭಾರತಕ್ಕೆ ಮರಳಬೇಕು. ಅಲ್ಲದೇ ಭಾರತದಲ್ಲಿರೋ ಪಾಕ್ ಪ್ರಜೆಗಳಿಗೆ ಇಲ್ಲಿಂದ ತೆರಳಲು 48 ಗಂಟೆಗಳ ಗಡುವು ನೀಡಲಾಗಿದೆ. ಹೀಗಾಗಿ ಸೀಮಾ ಹೈದರ್ ಮತ್ತೆ ಪಾಕಿಸ್ತಾನಕ್ಕೆ ಹೋಗುತ್ತಾಳಾ ಇಲ್ಲವಾ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.
ಇದನ್ನೂ ಓದಿ:ಪಾಕ್ಗೆ ಹೋದವರು ಮೇ 1ರೊಳಗೆ ಬರ್ಬೇಕು; ಭಾರತದಲ್ಲಿರೋ ಪಾಕಿಸ್ತಾನಿಯರಿಗೆ ತೊಲಗಲು ಡೆಡ್ಲೈನ್..!
ಈ ಬಗ್ಗೆ ನೆಟ್ಟಿಗರು ಸೀಮಾ ಹೈದರ್ ಅವರನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಿ. ಕನಿಷ್ಠ 3 ರಾಷ್ಟ್ರೀಯ ಗಡಿಗಳನ್ನು ದಾಟಿ ಉತ್ತರ ಪ್ರದೇಶ ತಲುಪಲು ಅವಕಾಶ ನೀಡಿದ ಪ್ರತಿಯೊಂದು ಭದ್ರತಾ ಸಂಸ್ಥೆಯನ್ನು ಸಹ ತನಿಖೆ ಮಾಡಿ ಎಂದು ಬರೆದುಕೊಂಡಿದ್ದಾರೆ ಮತ್ತೊಬ್ಬರು, ಸರ್ಕಾರ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಭಾರತದಿಂದ ಹೊರಹೋಗುವಂತೆ ಕೇಳಿದಾಗ, ಸೀಮಾ ಹೈದರ್ ಅವರಿಗೆ ಏಕೆ ಉಳಿಯಲು ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬ ಬಳಕೆದಾರರು, ನರೇಂದ್ರ ಮೋದಿ ಜಿ, ನಿಮ್ಮಲ್ಲಿ ವಿನಮ್ರ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ದಯವಿಟ್ಟು ಸೀಮಾ ಹೈದರ್ ಅವರನ್ನು ಪಾಕಿಸ್ತಾನಕ್ಕೆ ವಾಪಸ್ ಕಳುಹಿಸಿ ಎಂದು ಮನವಿ ಮಾಡಿದ್ದಾರೆ. ಆದ್ರೆ ಸೀಮಾ ಹೈದರ್ ಕರೆಯಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇನ್ನೂ ಮಾರ್ಚ್ 18ರಂದು ಗ್ರೇಟರ್ ನೋಯ್ಡಾದಲ್ಲಿರುವ ಕೃಷ್ಣ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅಲ್ಲದೇ ತಮ್ಮ ಮಗುವಿಗೆ ಭಾರತಿ ಮೀನಾ ಎಂದು ಹೆಸರಿಟ್ಟಿದ್ದರು. ಹಿಂದೂ ಸಂಪ್ರದಾಯಗಳಂತೆ ಹೆಣ್ಣು ಮಗುವಿಗೆ ನಾಮಕರಣ ಮಾಡಿ ಮತ್ತೆ ಸುದ್ದಿಯಾಗಿದ್ದರು. ಆದರೆ ಭಾರತವನ್ನು ಬಿಟ್ಟು ಮತ್ತೆ 4 ಮಕ್ಕಳನ್ನು ಕರೆದುಕೊಂಡು ಪಾಕಿಸ್ತಾನಕ್ಕೆ ಸೀಮಾ ಹೈದರ್ ಹೋಗ್ತಾರಾ ಅಂತ ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ