newsfirstkannada.com

VIDEO: ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ.. ಅಬುಧಾಬಿಯಲ್ಲೂ ಕನ್ನಡದಲ್ಲೇ ಮೋದಿ ಮಾತು!

Share :

Published February 13, 2024 at 9:36pm

    ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ

    ಪ್ರಧಾನಿ ಮೋದಿ ನೋಡಲು ಅಬುಧಾಬಿಯಲ್ಲಿ ಜನಸಾಗರ

    ಕನ್ನಡಲ್ಲೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅಬುಧಾಬಿಯ ಪ್ರವಾಸ ಕೈಗೊಂಡಿದ್ದಾರೆ. ಅರಬ್ ರಾಷ್ಟ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ನಾಳೆ ಉದ್ಘಾಟಿಸಲಿದ್ದಾರೆ. ಹೀಗಾಗಿ ಅಬುಧಾಬಿಯಲ್ಲಿ ನಡೆಯುತ್ತಿರೋ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದಾರೆ. ಜಯೇದಾ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ ಕಲರ್‌ಫುಲ್‌ ಕಾರ್ಯಕ್ರಮ ನಡೆದಿದ್ದು, 65 ಸಾವಿರಕ್ಕೂ ಹೆಚ್ಚು ಭಾರತೀಯರು  ಜಮಾಯಿಸಿದ್ದಾರೆ.

ಇದನ್ನು ಓದಿ: ದುಬೈನಲ್ಲೂ ಯುಪಿಐ RuPay ಕಾರ್ಡ್​ ಸೇವೆ; ಮೋದಿ ಜತೆ ಐತಿಹಾಸಿಕ ಒಪ್ಪಂದ; ​ಭಾರತೀಯರಿಗೇನು ಲಾಭ?

ಪ್ರಧಾನಿ ಮೋದಿ ಭಾಷಣ ಆರಂಭಿಸ್ತಿದ್ದಂತೆ ಮೋದಿ ಮೋದಿ ಎಂಬ ಘೋಷಣೆ ಮೊಳಗಿತು. ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ ಎಂದು ಅಬುಧಾಬಿಯಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಕನ್ನಡದಲ್ಲಿ ಮಾತನಾಡಿದ್ದಾರೆ. ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ ಎಂದ ಮೋದಿ ತೆಲುಗು, ತಮಿಳು, ಮಲಯಾಳಂನಲ್ಲೂ ಭಾಷಣ ಆರಂಭಿಸಿದ್ದು ವಿಶೇಷವಾಗಿತ್ತು.

ಇನ್ನೂ ಸುಮಾರು  65 ಸಾವಿರಕ್ಕೂ ಹೆಚ್ಚು ಭಾರತೀಯರು ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ನೊಂದಾಯಿಸಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಅಬುಧಾಬಿಯಲ್ಲಿರುವ ಅನಿವಾಸಿ ಭಾರತೀಯರಿಂದ ಅಭೂತಪೂರ್ವ ಪ್ರತಿಕ್ರಿಯೆ ಕಂಡು ಬಂದಿದೆ. ಮೋದಿ, ಮೋದಿ, ಮೋದಿ ಘೋಷಣೆ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಭಾರತ ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ.. ಅಬುಧಾಬಿಯಲ್ಲೂ ಕನ್ನಡದಲ್ಲೇ ಮೋದಿ ಮಾತು!

https://newsfirstlive.com/wp-content/uploads/2024/02/pm-modi-97.jpg

Load More