/newsfirstlive-kannada/media/post_attachments/wp-content/uploads/2025/06/TEAM_INDIA.jpg)
ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ಮುಗಿಸಿದೆ. 465 ರನ್ಗೆ ಬ್ರಿಟಿಷರು ಆಲೌಟ್ ಆಗಿದ್ದರಿಂದ ಟೀಮ್ ಇಂಡಿಯಾ ಕೇವಲ 6 ರನ್ಗಳ ಮುನ್ನಡೆ ಪಡೆದುಕೊಂಡು 2ನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ.
ಲೀಡ್ಸ್ನ ಹೆಡಿಂಗ್ಲೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಇದರಿಂದ ಟೀಮ್ ಇಂಡಿಯಾ ಮೊದಲ ಬ್ಯಾಟಿಂಗ್ ಮಾಡುವ ಅವಕಾಶ ಪಡೆದುಕೊಂಡಿತು. ಮೊದಲ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಒಟ್ಟು 471 ರನ್ಗಳಿಗೆ ಆಲೌಟ್ ಆಗಿತ್ತು. ಇದಾದ ಮೇಲೆ ಇಂಗ್ಲೆಂಡ್ ಬ್ಯಾಟಿಂಗ್ ಮಾಡಿತ್ತು.
ಇದನ್ನೂ ಓದಿ: ಟ್ರೋಫಿ ಗೆದ್ದ ಬೆನ್ನಲ್ಲೇ ಪಂಜಾಬ್ ಕಿಂಗ್ಸ್ ಸೇರಿದ RCB ತಂಡದ ಸ್ಫೋಟಕ ಬ್ಯಾಟರ್..!
[caption id="attachment_128692" align="alignnone" width="800"] ಹ್ಯಾರಿ ಬ್ರೂಕ್[/caption]
ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ಪರ ಓಪನರ್ ಡಕೆಟ್ 62 ರನ್ ಗಳಿಸಿದರೆ, ಆಲಿ ಪೋಪ್ ಅಮೋಘವಾದ ಸೆಂಚುರಿ ಸಿಡಿಸಿ ತಂಡಕ್ಕೆ ಕೊಡುಗೆ ನೀಡಿದರು. ಹ್ಯಾರಿ ಬ್ರೂಕ್ (99) ಕೇವಲ ಒಂದೇ ಒಂದು ರನ್ನಿಂದ ಸೆಂಚುರಿ ಮಿಸ್ ಮಾಡಿಕೊಂಡರು. ಇವರಾದ ಮೇಲೆ ಯಾವ ಆಂಗ್ಲ ಬ್ಯಾಟರ್ ಕೂಡ 40 ರನ್ಗಳ ಗಡಿ ದಾಟಲಿಲ್ಲ. ಹೀಗಾಗಿ ಮೊದಲ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 100.4 ಓವರ್ಗಳನ್ನು ಆಡಿದ ಇಂಗ್ಲೆಂಡ್ 465 ರನ್ಗೆ ಆಲೌಟ್ ಆಯಿತು.
ಭಾರತದ ಪರ ಅತ್ಯದ್ಭುತವಾದ ಬೌಲಿಂಗ್ ಮಾಡಿದ ಜಸ್ಪ್ರಿತ್ ಬೂಮ್ರಾ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ಎದುರಾಳಿಗಳ ಮೇಲೆ ಎರಗಿದರು. ಇದರಿಂದಾಗಿಯೇ ಬೂಮ್ರಾ 5 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ 3 ವಿಕೆಟ್ ಬೇಟೆಯಾಡಿದರು. ಇವರ ಜೊತೆ ಸಿರಾಜ್ ಕೂಡ ಉತ್ತಮ ಬೌಲಿಂಗ್ ಮಾಡಿ ಎರಡು ಪ್ರಮುಖ ವಿಕೆಟ್ಗಳನ್ನ ಪಡೆದು ಸಂಭ್ರಮಿಸಿದರು. ಸದ್ಯ ಭಾರತ ತಂಡ 2ನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದು ಓಪನರ್ ಯಶಸ್ವಿ ಜೈಸ್ವಾಲ್ ಔಟ್ ಆಗಿದ್ದಾರೆ. 70 ರನ್ಗಳಿಂದ ಕೆ.ಎಲ್ ರಾಹುಲ್, ಸಾಯಿ ಸುದರ್ಶನ್ ಬ್ಯಾಟಿಂಗ್ ಮಾಡುತ್ತಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ