ಭೀಕರ ಭೂ-ಕುಸಿತದ ಮಧ್ಯೆ ಕರ್ನಾಟಕಕ್ಕೆ ಇಲಾಖೆಯಿಂದ ಎಚ್ಚರಿಕೆ ಕರೆ
ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 3ರವರೆಗೆ ಭಾರೀ ಮಳೆ ಸಾಧ್ಯತೆ
ಯಾವೆಲ್ಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ?
ಕೇರಳದಲ್ಲಿ ಭೀಕರ ಭೂ-ಕುಸಿತ ಉಂಟಾಗಿ ಅಲ್ಲಿನ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇತ್ತ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹವಾಮಾನ ಭಿನ್ನವಾಗಿದೆ. ಕೆಲವೆಡೆ ಭಾರೀ ಮಳೆಯಾಗುತ್ತಿದ್ದು, ಇನ್ನೊಂದು ಕಡೆ ಭಾರೀ ಬಿಸಿಲು ಕಂಡು ಬರುತ್ತಿದೆ.
ಇದನ್ನೂ ಓದಿ: ಹನಿಮೂನ್ಗೆ ಹೋದ ನವಜೋಡಿಗಳು ನಾಪತ್ತೆ; ಕೇರಳದ ಭೀಕರತೆ ಬಿಚ್ಚಿಟ್ಟ ಬೆಂಗಳೂರಿನ ಚಾಲಕ- VIDEO
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಹೀಗಾಗಿ ರಾಜ್ಯದ ಹಲವು ದಕ್ಷಿಣ ಒಳನಾಡಿನ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ, ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಕೇರಳದ ಕಡಲ ತೀರದಲ್ಲಿ ಭಾರೀ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 31ರಿಂದ ಆಗಸ್ಟ್ 3ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹೀಗಾಗಿ ಜುಲೈ 31ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 1ರಂದು ಆರೆಂಜ್ ಅಲರ್ಟ್, ಆಗಸ್ಟ್ 2, 3ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ