ಬೆಂಗಳೂರಲ್ಲೂ ಬೀಳಲಿದೆ ಮಳೆ
ಮೀನುಗಾರರಿಗೆ ಎಚ್ಚರಿಕೆ
ಬಿರುಗಾಳಿಯ ವೇಗ ಎಷ್ಟಿದೆ ಗೊತ್ತಾ..?
ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಇವತ್ತಿನಿಂದ 5 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಯೂ ಮಳೆಯಾಗಲಿದೆ. ಜೊತೆಗೆ ರಾಜ್ಯದ ಹಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ, ಒಳನಾಡಿನ ಕೆಲವು ಕಡೆ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಕರಾವಳಿ ಭಾಗದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ಹೋಗಬಾರದು. ಇಂದು ಮತ್ತು ನಾಳೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ. ವೇಗದಲ್ಲಿ ಬೀಸಲಿದೆ. ಹೀಗಾಗಿ ಯಾರೂ ಕೂಡ ಸಮುದ್ರತೀರಕ್ಕೆ ಹೋಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ