ಸೇನೆ-ವಾಯುಪಡೆಯಿಂದ ಜಂಟಿ ಆಪರೇಷನ್ ಸಿಂಧೂರ್.. 70ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್..!

author-image
Ganesh
Updated On
ಸೇನೆ-ವಾಯುಪಡೆಯಿಂದ ಜಂಟಿ ಆಪರೇಷನ್ ಸಿಂಧೂರ್.. 70ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್..!
Advertisment
  • ಭಾರತದಿಂದ ಅತಿದೊಡ್ಡ ಕ್ಷಿಪಣಿ ಅಟ್ಯಾಕ್
  • 9 ಉಗ್ರರ ನೆಲೆಗಳು ನಾಶ ಮಾಡಿದ ಭಾರತೀಯ ಸೇನೆ
  • ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡ ಸೇನೆ

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ.

ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ದಾಳಿಯಲ್ಲಿ ಸುಮಾರು 70ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇಂದು ಬೆಳಗ್ಗೆ ರಕ್ಷಣಾ ಸಚಿವಾಲಯ ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದು, ಈ ಬಗ್ಗೆ ನಿಖರ ಮಾಹಿತಿ ಸಿಗಲಿದೆ.

ಇದನ್ನೂ ಓದಿ: BIG BREAKING: ಪಾಕ್ ವಿರುದ್ಧ ‘ಆಪರೇಷನ್ ಸಿಂಧೂರ್’.. ಭಾರತೀಯ ಸೇನೆಯಿಂದ ಏರ್​ಸ್ಟ್ರೈಕ್..!

publive-image

ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್​ಬಾದ್, ಬಹಾವಲ್​ಪುರ್, ಕೋಟ್ಲಿ, ಚಾಕ್​ಅಮ್ರು, ಗುಲ್​ಪುರ್, ಭಿಂಬರ್​ನಲ್ಲಿ ದಾಳಿ ಆಗಿದೆ. ಏಪ್ರಿಲ್ 22 ರಂದು ಪಾಕ್ ಬೆಂಬಲಿತ ಉಗ್ರರು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಪೈಶಾಚಿಕ ಕೃತ್ಯ ನಡೆಸಿದ್ದರು. ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಜೀವ ಕಳೆದುಕೊಂಡಿದ್ದರು. ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿತ್ತು.

ಇದನ್ನೂ ಓದಿ: ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್; ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಏನು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment