BIG BREAKING: ಪಾಕ್ ವಿರುದ್ಧ ‘ಆಪರೇಷನ್ ಸಿಂಧೂರ್’.. ಭಾರತೀಯ ಸೇನೆಯಿಂದ ಏರ್​ಸ್ಟ್ರೈಕ್..!

author-image
Ganesh
Updated On
ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್; ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಏನು..?
Advertisment
  • ನಡುರಾತ್ರಿಯೇ ಉಗ್ರರ ಸಂಹಾರಕ್ಕಿಳಿದ ಭಾರತ
  • ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರ ದಾಳಿ
  • ಪಾಕ್ ಮೇಲೆ ‘ಆಪರೇಷನ್ ಸಿಂಧೂರ್’ ಆರಂಭ

ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ (Indian Army) ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ಇಂದು ರಾತ್ರಿ ಕಾರ್ಯಾಚರಣೆ ಆರಂಭಿಸಿದೆ. ಆ ಮೂಲಕ ಉಗ್ರ ಪೋಷಕ ಪಾಕಿಸ್ತಾನಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಭಾರತ ದಿಟ್ಟ ಹೆಜ್ಜೆಯನ್ನಿಟ್ಟಿದೆ.

ಭಯೋತ್ಪಾದಕ ಶಿಬಿರಗಳ ಮೇಲೆ ಗುರಿಯಾಗಿಸಿಕೊಂಡು ಭಾರತ ಆಪರೇಷನ್ ಶುರುಮಾಡಿದೆ. ಪಾಕ್ ಮೇಲೆ ದಾಳಿಯನ್ನು ‘ಆಪರೇಷನ್ ಸಿಂಧೂರ್’ ಎಂದು ಕರೆಯಲಾಗಿದೆ. ಪಾಕಿಸ್ತಾನದ 9 ಪ್ರದೇಶದಲ್ಲಿರುವ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ. ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ವಿವರಣೆ ನೀಡಿದೆ.

ಪಹಲ್ಗಾಮ್ ದಾಳಿ ಪ್ರತೀಕಾರವಾಗಿ ಅಟ್ಯಾಕ್

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್‌ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು. ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ.

ಇದನ್ನೂ ಓದಿ: ನಿದ್ರೆಯಿಂದ ಬೆಚ್ಚಿಬಿದ್ದಂತಾದ ಪಾಕಿಸ್ತಾನ.. ಅಯ್ಯಯ್ಯೋ, ಯುದ್ಧದ ಆತಂಕದಲ್ಲಿ ಏನ್ಮಾಡ್ತಿದ್ದಾರೆ ನೋಡಿ..!​​

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment