/newsfirstlive-kannada/media/post_attachments/wp-content/uploads/2025/03/IND-vs-AUS-4.jpg)
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿ ಫೈನಲ್ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿದೆ. ದುಬೈನ ಅಂತಾರಾಷ್ಟ್ರಿಯ ಕ್ರಿಕೆಟ್ ಮೈದಾನದಲ್ಲಿ ಆಸಿಸ್ ನಾಯಕ ಸ್ಟೀವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಟಾಸ್ ಸೋತಿರುವ ಭಾರತ ತಂಡ ಮೊದಲು ಫೀಲ್ಡಿಂಗ್ ಮಾಡಲಿದ್ದು, ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡಲಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಎರಡೂ ತಂಡಗಳಿಗೆ ಇವತ್ತು ಗೆಲುವು ಅನಿವಾರ್ಯ.
ಹೇಗಿದೆ ಟೀಂ ಇಂಡಿಯಾ..!
ರೋಹಿತ್ ಶರ್ಮಾ (ಕ್ಯಾಪ್ಟನ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಂದ್ರ ಜಡೇಜಾ, ಮೊಹ್ಮದ್ ಶಮಿ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.
ಟೀಂ ಆಸ್ಟ್ರೇಲಿಯಾ
ಕೂಪರ್ ಕನ್ನೊಲ್ಲಿ, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ಕ್ಯಾಪ್ಟನ್), ಮರ್ನಸ್ ಲಬುಸೇನ್, ಜೋಶ್ ಇಂಗ್ಲಿಷ್ (ವಿಕೆಟ್ ಕೀಪರ್), ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್ವೆಲ್, ಬೆನ್ ದ್ವಾರಶುಯಿಸ್, ನಥಾನ್ ಎಲ್ಲಿಸ್, ಆ್ಯಡಂ ಜಂಪಾ, ತನ್ವೀರ್ ಸಿಂಘಾ
ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ ಆಸ್ಟ್ರೇಲಿಯಾ ಎರಡು ಮುಖ್ಯ ಬದಲಾವಣೆ ಮಾಡಿದೆ. ಆರಂಭಿಕ ಬ್ಯಾಟ್ಸ್ಮನ್ ಕೂಪರ್ ಹಾಗೂ ಲೆಗ್ ಸ್ಪಿನ್ನರ್ ತನ್ವೀರ್ ಸಂಘಾಗೆ ಅವಕಾಶ ಮಾಡಿಕೊಟ್ಟಿದೆ.
ಇದನ್ನೂ ಓದಿ: ಆಸ್ಟ್ರೇಲಿಯಾ ಟಾರ್ಗೆಟ್ ಒಬ್ಬನೇ.. 11 ರಣಕಲಿಗಳಿದ್ದರೂ ಆಸಿಸ್ ಪಾಲಿಗೆ ಈತ ಸಿಂಹಸ್ವಪ್ನ..!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್