/newsfirstlive-kannada/media/post_attachments/wp-content/uploads/2025/01/CHEPAK.jpg)
ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು T20 ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯ ಜನವರಿ 22 ರಂದು ನಡೆಯಿತು. ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಎರಡನೇ ಮ್ಯಾಚ್ ನಡೆಯಲಿದೆ. ಇದಕ್ಕಾಗಿ ಎರಡೂ ತಂಡಗಳು ಬೆವರು ಹರಿಸುತ್ತಿವೆ.
ಎರಡನೇ ಟಿ20 ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಗುರಿ ಭಾರತದ್ದಾಗಿದೆ. ಇತ್ತ ಎರಡನೇ ಟಿ20 ಪಂದ್ಯದಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಎರಡನೇ ಟಿ20 ಪಂದ್ಯಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ವಾತಾವರಣ ಹೇಗಿರಲಿದೆ?
ಹವಾಮಾನ ಇಲಾಖೆ ಹೇಳಿದ್ದೇನು..?
ಹವಾಮಾನ ಇಲಾಖೆ ಕ್ರಿಕೆಟ್ ಪ್ರೇಮಿಗಳಿಗೆ ಗುಡ್​ನ್ಯೂಸ್ ನೀಡಿದೆ. ಅಕ್ಯುವೆದರ್ ಡಾಟ್ ಕಾಮ್ ಪ್ರಕಾರ, ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇಲ್ಲ. ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಆರಲಿದೆ. ಗಾಳಿಯು ಗಂಟೆಗೆ 17 ರಿಂದ 37 ಕಿಲೋ ಮೀಟರ್ ವೇಗದಲ್ಲಿ ಉತ್ತರ-ಈಶಾನ್ಯದಿಂದ ಬೀಸಲಿದೆ. ಇದರಿಂದ ಮೋಡ ಕವಿದ ವಾತಾವರಣ ನಿರ್ಮಾಣ ಆಗಬಹುದು. ಆದರೆ ಆಟದಲ್ಲಿ ಯಾವುದೇ ಅಡಚಣೆ ಇರುವುದಿಲ್ಲ.
ಇದನ್ನೂ ಓದಿ: ಅರಮನೆ ಮೈದಾನದ ಭೂಮಿ ಬಳಕೆಗೆ ಸುಗ್ರೀವಾಜ್ಞೆ.. ರಾಜ ವಂಶಸ್ಥರು- ಸರ್ಕಾರ ಮಧ್ಯೆ ಕಾನೂನು ಸಮರ
ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್, ಲಿಯಾಮ್ ಲಿವಿಂಗ್ಸ್ಟನ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜೇಮೀ ಸ್ಮಿತ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್.
ಇದನ್ನೂ ಓದಿ: ಸೂರ್ಯಗೆ ಕಾಡ್ತಿದೆ ಒಂದೇ ಒಂದು ಚಿಂತೆ.. ಸರಿ ಹೊದ್ರೆ ಟೀಂ ಇಂಡಿಯಾ ನೆಕ್ಸ್ಟ್​ ಲೇವೆಲ್​..!
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us