/newsfirstlive-kannada/media/post_attachments/wp-content/uploads/2025/07/Nitish-kumar-Reddy.jpg)
ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅರ್ಷದೀಪ್ ಸಿಂಗ್ ಔಟ್ (Arshdeep Singh) ಆಗಿದ್ದರು. ಮತ್ತೊಂದು ಕಡೆ ಗಾಯಗೊಂಡಿರುವ ಆಕಾಶ್‌ದೀಪ್ ಬಗ್ಗೆ ಪ್ರಶ್ನೆಗಳಿವೆ. ಇದೀಗ ಟೀಂ ಇಂಡಿಯಾದ ಆಲ್​​ರೌಂಡರ್ ನಿತೀಶ್ ಕುಮಾರ್ ರೆಡ್ಡಿ(Nitish Kumar Reddy) ಸರಣಿಯಿಂದ ಹೊರ ಬಿದ್ದಿದ್ದಾರೆ.
ಎರಡನೇ ಮತ್ತು 3ನೇ ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದ ರೆಡ್ಡಿ ಭಾನುವಾರ ಜಿಮ್‌ನಲ್ಲಿ ಅಭ್ಯಾಸ ಮಾಡುವಾಗ ಗಾಯಗೊಂಡು ಮನೆಗೆ ಮರಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಎಡ ಮೊಣಕಾಲಿನ ಗಾಯದಿಂದಾಗಿ ನಿತೀಶ್ ಕುಮಾರ್ ರೆಡ್ಡಿ, ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ನಿತೀಶ್ ರೆಡ್ಡಿ ವಾಪಸ್ ತವರಿಗೆ ಮರಳಲಿದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬಿಸಿಸಿಐ ಹಾರೈಸಿದೆ.
ಇದನ್ನೂ ಓದಿ: BCCI ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ರೋಜರ್ ಬಿನ್ನಿ ಗುಡ್​ಬೈ.. ಹೊಸ ಬಾಸ್ ಯಾರ್ ಆಗ್ತಾರೆ?
ರೆಡ್ಡಿ ಬದಲಿಗೆ ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಅವರು ಮ್ಯಾಂಚೆಸ್ಟರ್‌ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. 4ನೇ ಟೆಸ್ಟ್ ಪಂದ್ಯ ಬುಧವಾರ ಓಲ್ಡ್ ಟ್ರಾಫರ್ಡ್‌ನಲ್ಲಿ ಆರಂಭವಾಗಲಿದೆ.
ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೆಟ್‌ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ ಜುರೆಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲದೀಪ್ ಯಾದವ್ ಮತ್ತು ಅಂಶುಲ್ ಕಾಂಬೋಜ್
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ