/newsfirstlive-kannada/media/post_attachments/wp-content/uploads/2025/03/TEAM-INDIA-8.jpg)
ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಭಾನುವಾರ ದುಬೈನ ಅಂತಾರಾಷ್ಟ್ರಿಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ನಾಲ್ವರು ಆಟಗಾರರು ಫೈನಲ್‌ನಲ್ಲೂ ಮಿಂಚಿದ್ರೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಭಾರತಕ್ಕೆ ಖಚಿತವಾಗಿದೆ. ಈ ನಾಲ್ವರ ಶ್ರಮದಿಂದ ಟೀಂ ಇಂಡಿಯಾ ಫೈನಲ್ ಪ್ರವೇಶ ಮಾಡಿದೆ ಅಂದ್ರೆ ತಪ್ಪಾಗಲ್ಲ.
ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸಿದ್ದರಾಮಯ್ಯ ಗುಡ್ನ್ಯೂಸ್.. ಬಿಸಿಯೂಟ ಕಾರ್ಯಕರ್ತೆಯರಿಗೂ ಸಿಹಿಸುದ್ದಿ..!
ಗ್ರೂಪ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ತಂಡವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ವರುಣ್ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. 10 ಓವರ್‌ಗಳಲ್ಲಿ 42 ರನ್‌ಗಳಿಗೆ 5 ವಿಕೆಟ್‌ಗಳನ್ನು ಪಡೆದಿದ್ದರು. ವರುಣ್‌ನ ಸ್ಪಿನ್ ನ್ಯೂಜಿಲೆಂಡ್‌ಗೆ ತೊಂದರೆ ಆಗಲಿದೆ. ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಚಕ್ರವರ್ತಿ ಮೂರನೇ ಸ್ಥಾನದಲ್ಲಿದ್ದಾರೆ.
ವರುಣ್ ಚಕ್ರವರ್ತಿ 7 ವಿಕೆಟ್ ಪಡೆದಿದ್ದಾರೆ. ಶಮಿ ಕೂಡ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಬಹುದು. ಶಮಿ 4 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದಾರೆ. ಫೈನಲ್‌ನಲ್ಲಿ ಶಮಿ ಪ್ರದರ್ಶನ ಮುಖ್ಯವಾಗಿದೆ.
ಕೊಹ್ಲಿ, ಅಯ್ಯರ್ಗೆ ಸರಿಸಾಟಿ ಯಾರೂ ಇಲ್ಲ..!
ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಇಲ್ಲಿಯವರೆಗೆ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಕೊಹ್ಲಿ 217 ರನ್ ಗಳಿಸಿದ್ದಾರೆ. ಒಂದು ಶತಕ ಕೂಡ ಸೇರಿದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅಯ್ಯರ್ ಕೂಡ ಅದ್ಭುತವಾಗಿ ಬ್ಯಾಟಿಂಗ್ ಮಾಡ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿರುವ ಅಯ್ಯರ್, 195 ರನ್ ಗಳಿಸಿದ್ದಾರೆ. ಫೈನಲ್‌ನಲ್ಲೂ ಅದ್ಭುತ ರನ್ ಚಚ್ಚಬಹುದು.
ಇದನ್ನೂ ಓದಿ: 9 ಕೋಟಿ ಗ್ರಾಹಕರಿಗೆ BSNL ಹೋಳಿ ಹಬ್ಬದ ಆಫರ್; ಭರ್ಜರಿ ಗುಡ್ನ್ಯೂಸ್…!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್