ನವರಾತ್ರಿ ಹಿನ್ನೆಲೆಯಲ್ಲಿ ಗುಜರಾತ್ಗೆ ಕಾಡಿದೆ ಭದ್ರತಾ ಸಮಸ್ಯೆ
ಅ.15 ರಂದು ಮೋದಿ ಸ್ಟೇಡಿಯಂನಲ್ಲಿ ಹೈ-ವೋಲ್ಟೇಜ್ ಪಂದ್ಯ
ಬಿಸಿಸಿಐನಿಂದ ಮಹತ್ವದ ಸಭೆ, ನಾಳೆಯೇ ನಿರ್ಧಾರ ಸಾಧ್ಯತೆ
ಇದೇ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ಗೆ ಬಿಸಿಸಿಐ ತಯಾರಿ ನಡೆಸುತ್ತಿದೆ. ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಈಗಾಗಲೇ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಫೈಟ್ ಸೇರಿದಂತೆ ವಿಶ್ವಕಪ್ನ ಸಂಪೂರ್ಣ ಶೆಡ್ಯೂಲ್ಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ರಿಲೀಸ್ ಮಾಡಿದೆ.
ವರದಿಗಳ ಪ್ರಕಾರ, ಅಕ್ಟೋಬರ್ 15 ರಂದು ನಡೆಯುವ ಭಾರತ ಮತ್ತು ಪಾಕ್ ಪಂದ್ಯದ ಶೆಡ್ಯೂಲ್ನಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ನವರಾತ್ರಿಯ ಮೊದಲ ದಿನ ಹಿನ್ನೆಲೆಯಲ್ಲಿ ಭದ್ರತೆಗೆ ದಕ್ಕೆಯಾಗುವ ಅನುಮಾನ ಕಾಡಿದೆ. ಹೀಗಾಗಿ ಭಾರತ ಮತ್ತು ಪಾಕ್ ನಡುವಿನ ಪಂದ್ಯದ ಶೆಡ್ಯೂಲ್ ಬದಲಾವಣೆಯಾಗುವ ನಿರೀಕ್ಷೆ ಮಾಡಲಾಗಿದೆ. ನವರಾತ್ರಿ ದಿನದ ರಾತ್ರಿ ಗರ್ಭಾ ಡ್ಯಾನ್ಸ್ ನಡೆಯುತ್ತದೆ. ಅದರಲ್ಲೂ ಗುಜರಾತ್ನಲ್ಲಿ ನವರಾತ್ರಿಯನ್ನು ಹೆಚ್ಚು ವಿಶೇಷವಾಗಿ ಆಚರಣೆ ಮಾಡುತ್ತಾರೆ.
ನಾಳೆ ಮಹತ್ವದ ಸಭೆ
ಹೀಗಾಗಿ ಗುಜರಾತ್ ಸರ್ಕಾರ, ಪಂದ್ಯದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುವಂತೆ ಬಿಸಿಸಿಐಗೆ ಮನವಿ ಮಾಡಿಕೊಂಡಿದೆ. ಈ ಸಂಬಂಧ ನಾಳೆ ಬಿಸಿಸಿಐ ಸೆಕ್ರೆಟರಿ ಜಯ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ನಡೆಯಲಿರುವ ಪಂದ್ಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಏಕದಿನ ವಿಶ್ವಕಪ್ ಪಂದ್ಯವು ಆಗಸ್ಟ್ 5 ರಿಂದ ಶುರುವಾಗಲಿದೆ. ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್