/newsfirstlive-kannada/media/post_attachments/wp-content/uploads/2024/11/SANJU-SAMSON.jpg)
ಮೊದಲ T20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್‌ಗಳಿಂದ ಸೋಲಿಸಿದೆ. ಡರ್ಬನ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ, ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಆತಿಥೇಯ ದಕ್ಷಿಣ ಆಫ್ರಿಕಾ, 141 ರನ್‌ಗಳಿಗೆ ಆಲೌಟ್ ಆಗಿದೆ.
ಸಂಜು ಸ್ಯಾಮ್ಸನ್ ಶತಕ, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ಅವರ ಮಾರಕ ಬೌಲಿಂಗ್ ದಾಳಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಸ್ಯಾಮ್ಸನ್ 107 ರನ್ ಗಳಿಸಿದರೆ, ಬಿಷ್ಣೋಯ್ ಮತ್ತು ಚಕ್ರವರ್ತಿ ತಲಾ ಮೂರು ವಿಕೆಟ್ ಕಬಳಿಸಿದರು. ಅಭಿಷೇಕ್ ಶರ್ಮಾ ದೊಡ್ಡ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಸಂಜು ಸ್ಯಾಮ್ಸನ್ ಟಿ20 ಪಂದ್ಯದಲ್ಲಿ ಸತತ ಎರಡನೇ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 10 ಸಿಕ್ಸರ್‌ಗಳ ನೆರವಿನಿಂದ 107 ರನ್ ಗಳಿಸಿದರು. ತಿಲಕ್ ವರ್ಮಾ 18 ಎಸೆತಗಳಲ್ಲಿ 33 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು.
ಇದನ್ನೂ ಓದಿ:6,6,6,6,6,6,6,6,6,6; ಡರ್ಬನ್‌ನಲ್ಲಿ ಸಿಕ್ಸರ್‌ಗಳ ಸುರಿಮಳೆ.. ಚಚ್ಚಿ ಬಿಸಾಕಿದ ಸಂಜು ಸ್ಯಾಮ್ಸನ್!
ದಕ್ಷಿಣ ಆಫ್ರಿಕಾ ವಿಫಲ
ತವರು ನೆಲದಲ್ಲಿ 203 ರನ್‌ಗಳ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭ ಅತ್ಯಂತ ಕಳಪೆಯಾಗಿತ್ತು. ನಾಯಕ ಏಡನ್ ಮಾರ್ಕ್ರಾಮ್ ಕೇವಲ 8 ರನ್ ಗಳಿಸಿ ಔಟಾದರು. ತಂಡದ ಸ್ಕೋರ್ 44 ಆಗುವ ವೇಳೆಗೆ ಅಗ್ರ ಕ್ರಮಾಂಕದ ಮೂರು ವಿಕೆಟ್‌ಗಳನ್ನು ದಕ್ಷಿಣ ಆಫ್ರಿಕಾ ಕಳೆದುಕೊಂಡಿತು. ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ 42 ರನ್‌ಗಳ ಜೊತೆಯಾಟ ನೀಡಿದರು. ವರುಣ್ ಚಕ್ರವರ್ತಿ ಇವರಿಬ್ಬರನ್ನು ಒಂದೇ ಓವರ್‌ನಲ್ಲಿ ಔಟ್ ಮಾಡುವ ಮೂಲಕ ದೊಡ್ಡ ಹೊಡೆತ ನೀಡಿದರು.
ಮಿಂಚಿದ ಚಕ್ರವರ್ತಿ..!
ಮಧ್ಯಮ ಓವರ್‌ಗಳಲ್ಲಿ ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯ್ ಮಾರಕ ಬೌಲಿಂಗ್ ದಾಳಿ ನಡೆಸಿದರು. ಇವರಿಬ್ಬರು ತಲಾ ಮೂರು ವಿಕೆಟ್ ಕಬಳಿಸಿದರೆ, ಅವೇಶ್ ಖಾನ್ ಎರಡು ಮತ್ತು ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆದರು.
ಇದನ್ನೂ ಓದಿ:ಗಂಭೀರ್ ಅಂದು ನುಡಿದಿದ್ದ ಮಾತು ನಿಜವಾಗಿಸಿದ ಸಂಜು; ಏನದು..?
ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us