newsfirstkannada.com

2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್ ಗೇಮ್ಸ್ ಆಯೋಜನೆ -ಪ್ರಧಾನಿ ಮೋದಿ ಹೇಳಿದ್ದೇನು..?

Share :

Published January 20, 2024 at 8:08am

  2023ರ ಖೇಲೋ ಇಂಡಿಯಾ ಯೂತ್ ಗೇಮ್ಸ್​ಗೆ ಚಾಲನೆ

  ಚೆನ್ನೈನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಗೇಮ್ಸ್​

  ಜನವರಿ 19 ರಿಂದ 31ವರೆಗೆ ಕ್ರೀಡಾಕೂಟ ಆಯೋಜನೆ

ತಮಿಳುನಾಡು ರಾಜಧಾನಿ ಚೆನ್ನೈಗೆ ನಿನ್ನೆ ಪ್ರಧಾನಿ ಮೋದಿ ಭೇಟಿ ನೀಡಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ರೋಡ್​​ ಶೋ ನಡೆಸಿದರು. ರೋಡ್​​​ ಶೋ ವೇಳೆ ಸಾವಿರಾರು ಜನ ಭಾಗಿಯಾಗಿದ್ರು.

ಬಳಿಕ ಚೆನ್ನೈನಲ್ಲಿ ಆಯೋಜಿಸಿದ್ದ 2023ರ ಖೇಲೋ ಇಂಡಿಯಾ ಯೂತ್ ಗೇಮ್ಸ್ ಅನ್ನ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಉಪಸ್ಥಿತರಿದ್ದರು.

ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿರುವ ಅವರು, 2029ರಲ್ಲಿ ಯೂತ್ ಒಲಿಂಪಿಕ್ಸ್​ ಹಾಗೂ 2036ರಲ್ಲಿ ಒಲಿಂಪಿಕ್ಸ್ ಗೇಮ್ಸ್​ ನಡೆಸಲು ದೇಶ ಬದ್ಧವಾಗಿದೆ. ‘ಏಕ್ ಭಾರತ್ ಶ್ರೇಷ್ಠ ಭಾರತ್’ ನಿಜವಾಗಿಯೂ ಸ್ಫೂರ್ತಿಯನ್ನು ತುಂಬುತ್ತಿದೆ. ಹೊಸ ವರ್ಷದ ಆರಂಭದಲ್ಲೇ ಶುರುವಾಗಿರುವ ಯೂತ್​ ಗೇಮ್ಸ್​ ಹೊಸ ಮೈಲಿಗಲ್ಲಿಗೆ ಸೇರಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಜನವರಿ 31ವರೆಗೂ ಈ ಕ್ರೀಡಾಕೂಟ ನಡೆಯಲಿದೆ.

ಇದೇ ವೇಳೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದ್ರು. ಅಲ್ಲದೇ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ಪ್ರಸಾರ ಕ್ಷೇತ್ರಕ್ಕೆ ಸಂಬಂಧಿಸಿದ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

2036ರಲ್ಲಿ ಭಾರತದಲ್ಲಿ ಒಲಿಂಪಿಕ್ಸ್ ಗೇಮ್ಸ್ ಆಯೋಜನೆ -ಪ್ರಧಾನಿ ಮೋದಿ ಹೇಳಿದ್ದೇನು..?

https://newsfirstlive.com/wp-content/uploads/2024/01/MODI-41.jpg

Load More