newsfirstkannada.com

Ind Vs Eng: ‘ಇಂಗ್ಲೆಂಡ್‌ ವಿರುದ್ಧ ಭಾರತ ಗೆದ್ದೇ ಗೆಲ್ಲಲಿದೆ’- ರವೀಂದ್ರ ಜಡೇಜಾ ಪತ್ನಿ ರಿವಾಬಾ ಭವಿಷ್ಯ ನಿಜವಾಗುತ್ತಾ?

Share :

28-10-2023

  ನಾಳೆ ಲಕ್ನೋ ಕ್ರಿಕೆಟ್ ಸ್ಟೇಡಿಯಂನಲ್ಲಿ ಮದಗಜಗಳ ರಣಕಾಳಗ

  ಆಲ್‌ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ವಿಶ್ವಾಸ

  ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಕ್ರಿಕೆಟ್‌ ತಂಡದಿಂದ ಅದ್ಭುತ ಪ್ರದರ್ಶನ

ಲಕ್ನೋ: ವಿಶ್ವಕಪ್‌ ಹಣಾಹಣಿಯ ನಾಳಿನ ಮಹತ್ವದ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು ಭಾರತ ಎದುರಿಸುತ್ತಿದೆ. ಲಕ್ನೋದ ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮದಗಜಗಳ ಕಾಳಗಕ್ಕೆ ವೇದಿಕೆ ಸಜ್ಜಾಗಿದೆ. ನಾಳಿನ ಪಂದ್ಯದಲ್ಲಿ ಯಾರ್ ಗೆಲ್ತಾರೆ ಅನ್ನೋದು ಇಡೀ ಭಾರತದ ಕ್ರಿಕೆಟ್‌ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

ಭಾರತ, ಇಂಗ್ಲೆಂಡ್ ವಿಶ್ವಕಪ್‌ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿರುವಾಗ ಆಲ್‌ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ರವೀಂದ್ರ ಜಡೇಜಾ ಅವರು ತನ್ನ ಅದ್ಭುತ ಪ್ರದರ್ಶನದಿಂದ ಟೀಂ ಇಂಡಿಯಾ ಮತ್ತು ಕೋಚ್‌ಗಳ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. 2023ರ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಇದುವರೆಗೂ ಭಾರತ ಒಂದು ಪಂದ್ಯವನ್ನು ಸೋತಿಲ್ಲ. ಹೀಗಾಗಿ ನಾಳಿನ ಇಂಗ್ಲೆಂಡ್ ವಿರುದ್ಧ ಪಂದ್ಯವನ್ನು ಕಾತರದಿಂದ ಎದುರು ನೋಡಿತ್ತಿರುವುದಾಗಿ ರಿವಾಬಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ರಿವಾಬಾ ಅವರು, ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ದಾಖಲೆಯ ಗೆಲುವು ಸಾಧಿಸಿದ್ದು, ನನಗೆ ಸಂತೋಷ ತಂದಿದೆ. ಈ ಸಂದರ್ಭದಲ್ಲಿ ನಾನು ಮೊದಲು ಭಾರತದ ಎಲ್ಲಾ ಆಟಗಾರರು ಮತ್ತು ಎಲ್ಲಾ ಕ್ರಿಕೆಟ್ ಅಭಿಮಾನಿಗಳನ್ನು ಅಭಿನಂದಿಸುತ್ತೇನೆ. ಭಾರತ ಮತ್ತೊಮ್ಮೆ ವಿಶ್ವಕಪ್ ಗೆಲ್ಲಲಿ ಎಂದು ನಾನು ಪ್ರಾರ್ಥಿಸುತ್ತೇನೆ ಮತ್ತು ಶುಭ ಹಾರೈಸುತ್ತೇನೆ ಎಂದಿದ್ದಾರೆ.

ವಿಶ್ವಕಪ್ ಪಂದ್ಯಗಳಲ್ಲಿ ಭಾರತ ಕ್ರಿಕೆಟ್‌ ತಂಡದ ಅದ್ಭುತ ಪ್ರದರ್ಶನ ನಾಳೆಯೂ ಮುಂದುವರಿಯಲಿದೆ. ಅಭಿಮಾನಿಯಾಗಿ ನಾನು ಭಾರತ, ಇಂಗ್ಲೆಂಡ್ ಪಂದ್ಯವನ್ನು ಎದುರು ನೋಡುತ್ತಿದ್ದೇನೆ ಮತ್ತು ಶುಭ ಹಾರೈಸುತ್ತೇನೆ. ರವೀಂದ್ರ ಜಡೇಜಾ ಅವರು ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಉತ್ತಮ ಪ್ರದರ್ಶನವನ್ನು ತೋರುತ್ತಿದ್ದಾರೆ. ಅದೇ ರೀತಿಯ ಪ್ರದರ್ಶನವನ್ನು ಮುಂದುವರಿಸುತ್ತಾರೆ ಎಂದು ರಿವಾಬಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Ind Vs Eng: ‘ಇಂಗ್ಲೆಂಡ್‌ ವಿರುದ್ಧ ಭಾರತ ಗೆದ್ದೇ ಗೆಲ್ಲಲಿದೆ’- ರವೀಂದ್ರ ಜಡೇಜಾ ಪತ್ನಿ ರಿವಾಬಾ ಭವಿಷ್ಯ ನಿಜವಾಗುತ್ತಾ?

https://newsfirstlive.com/wp-content/uploads/2023/10/Ravindra-Jadeja-1.jpg

Load More