/newsfirstlive-kannada/media/post_attachments/wp-content/uploads/2024/06/Rohit-Sharma_Kohli.jpg)
ಇಂದು ಬಾರ್ಬಡೋಸ್ ಬ್ರಿಡ್ಜ್‌ಟೌನ್ ಮೈದಾನದಲ್ಲಿ ನಡೆಯಲಿರೋ 2024ರ ಟಿ20 ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಸೌತ್ ಆಫ್ರಿಕಾ, ಟೀಮ್ ಇಂಡಿಯಾ ಮುಖಾಮುಖಿ ಆಗಲಿವೆ. ಹೇಗಾದ್ರೂ ಮಾಡಿ ಫೈನಲ್ ಗೆದ್ದು ಟ್ರೋಫಿ ತಮ್ಮದಾಗಿಸಿಕೊಳ್ಳಬೇಕು ಎಂದು ಎರಡು ತಂಡಗಳು ಪೈಪೋಟಿ ನಡೆಸುತ್ತಿವೆ.
ಇನ್ನು, ಟಾಸ್ ಗೆದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಫಸ್ಟ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ ಏಡನ್ ಮರ್ಕ್ರಮ್ ನಾಯಕತ್ವದ ಸೌತ್ ಆಫ್ರಿಕಾ ಬೌಲಿಂಗ್ ಮಾಡಲಿದೆ. ಅಚ್ಚರಿ ಎಂದರೆ ಟೀಮ್ ಇಂಡಿಯಾದಲ್ಲಿ ಇಂದು ಯಾವುದೇ ಬದಲಾವಣೆ ಇಲ್ಲ.
ಎರಡು ತಂಡಗಳ ಪ್ಲೇಯಿಂಗ್ ಎಲೆವೆನ್ ಹೀಗಿದೆ..!
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ಕ್ಯಾಪ್ಟನ್), ವಿರಾಟ್ ಕೊಹ್ಲಿ, ರಿಷಭ್ ಪಂತ್ (WK), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಸೌತ್ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.
ಇದನ್ನೂ ಓದಿ:ಫೈನಲ್ ಪಂದ್ಯಕ್ಕೆ ರಣಬೇಟೆಗಾರನ ಎಂಟ್ರಿ.. ಟೀಮ್ ಇಂಡಿಯಾಗೆ ಬಂತು ಆನೆಬಲ!
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ