ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಟ್ಟಕ್ಕಾಗಿ ಕಾದಾಟ
ಫೈನಲ್ನಲ್ಲಿ ಟೀಂ ಇಂಡಿಯಾ, ಆಸೀಸ್ ಸೆಣಸಾಟ
ಹಲವು ದಾಖಲೆಗಳು ಮುರಿಯಲಿದೆ ಟೀಂ ಇಂಡಿಯಾ
ಇಂದಿನಿಂದ ಇಂಗ್ಲೆಂಡ್ನ ಓವಲ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡ ಮುಖಾಮುಖಿ ಆಗುತ್ತಿದೆ. ಈಗಾಗಲೇ ಟಾಸ್ ಗೆದ್ದಿರೋ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡ ಫಸ್ಟ್ ಬ್ಯಾಟಿಂಗ್ ಮಾಡುತ್ತಿದೆ.
ಇನ್ನು ಆಸ್ಟ್ರೇಲಿಯಾ ವಿರುದ್ಧದ ಈ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಕೆಲವು ಆಟಗಾರರು ಹಲವು ಪ್ರಮುಖ ದಾಖಲೆಗಳನ್ನು ಮುರಿಯಲಿದ್ದಾರೆ. ಈ ಪೈಕಿ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಕೇವಲ 36 ರನ್ ಬಾರಿಸಿದ್ರೆ ಎಂಎಸ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗಳಿಸಿರೋ 17092 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದಂತಾಗುತ್ತದೆ.
ಒಂದು ವೇಳೆ ಆರ್ ಅಶ್ವಿನ್ಗೆ ಪಂದ್ಯದ ಮಧ್ಯದಲ್ಲಿ ಆಡಲು ಅವಕಾಶ ಸಿಕ್ಕಿ ಕೇವಲ ಮೂರು ವಿಕೆಟ್ ಕಬಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಸ್ಥಾನವನ್ನು ಪಡೆದುಕೊಳ್ಳುತ್ತಾರೆ. ಇದು ಕುಂಬ್ಳೆ ಹೆಸರಿನಲ್ಲಿರೋ ಪ್ರಮುಖ ದಾಖಲೆಯನ್ನು ಮುರಿಯಲಿದೆ.
ಚೇತೇಶ್ವರ್ ಪೂಜಾರ 59 ರನ್ ಸಿಡಿಸಿದ್ರೆ ಟೆಸ್ಟ್ನಲ್ಲಿ ಸೌರವ್ ಗಂಗೂಲಿ 7212 ರನ್ ದಾಖಲೆ ಮುರಿಯಬಹುದು. ಕೊಹ್ಲಿ ಕೇವಲ 21 ರನ್ ಗಳಿಸಿದರೆ ಸಾಕು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ 2000ಕ್ಕೂ ಅಧಿಕ ರನ್ ಬಾರಿಸಿದ ಆಟಗಾರ ಎಂಬ ಕೀರ್ತಿ ಪಡೆಯಲಿದ್ದಾರೆ.
ಒಂದು ವೇಳೆ ಕೊಹ್ಲಿ 55 ರನ್ ಸಿಡಿಸಿದ್ರೆ ಸ್ಟ್ರೇಲಿಯಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ದಾಟಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ