/newsfirstlive-kannada/media/post_attachments/wp-content/uploads/2024/08/Independence-Day.jpg)
ಇಡೀ ದೇಶಾದ್ಯಂತ ಜನ ಎಂದಿನಂತೆಯೇ ಈ ವರ್ಷವು ಆಗಸ್ಟ್ 15ನೇ ತಾರೀಕು 78ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲು ಸಜ್ಜಾಗಿದ್ದಾರೆ. ಸ್ವಾತಂತ್ರ್ಯ ದಿನ ಭಾರತದ ಇತಿಹಾಸದಲ್ಲೇ ಅತ್ಯಂತ ಮಹತ್ವದ ದಿನ. ಬ್ರಿಟೀಷ್ ವಸಾಹತುಶಾಹಿ ಆಳ್ವಿಕೆಯಿಂದ ಭಾರತ ವಿಮೋಚನೆಯಾಗಲು ಲಕ್ಷಾಂತರ ಜನ ಪ್ರಾಣತೆತ್ತ ದಿನ. ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಎಲ್ಲಾ ವೀರರನ್ನು ನೆನೆದು ನಮನ ಸಲ್ಲಿಸೋ ದಿನವೂ ಹೌದು.
ಸ್ವಾತಂತ್ರ್ಯ ದಿನಾಚರಣೆಯಂದು ದೇಶಕ್ಕಾಗಿ ಪ್ರಾಣವನ್ನೂ ಲೆಕ್ಕಿಸದೆ ಹೋರಾಡಿದ ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಣೆ ಮಾಡಲಾಗುತ್ತದೆ. 1948ರಲ್ಲಿ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಇದು ಭಾರತಕ್ಕೆ ಹೊಸ ಯುಗದ ಉದಯವನ್ನು ಸೂಚಿಸುತ್ತದೆ. ಹಾಗಾಗಿ ಇಂತಹ ಮಹತ್ವದ ದಿನದ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಕೆಲವು ವಿಚಾರಗಳು ನಿಮ್ಮ ಮುಂದಿಡಲಿದ್ದೇವೆ.
ನೀವು ತಿಳಿದುಕೊಳ್ಳಬೇಕಾದ ಹಲವು ವಿಷಯಗಳು..!
- ಭಾರತ ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆದ ವರ್ಷ 1947
- ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ
- ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್
- ಭಾರತವು ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತದೆ
- ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್
- ಲಾರ್ಡ್ ಮೌಂಟ್‌ಬ್ಯಾಟನ್ ಭಾರತದ ಗವರ್ನರ್ ಜನರಲ್ ಆಗಿದ್ರು
- ಭಾರತೀಯ ರಾಷ್ಟ್ರಧ್ವಜವನ್ನು ವಿನ್ಯಾಸಗೊಳಿಸಿದ್ದು ಪಿಂಗಲಿ ವೆಂಕಯ್ಯ
- ಭಾರತೀಯ ರಾಷ್ಟ್ರಧ್ವಜದ ಮೇಲ್ಭಾಗದಲ್ಲಿ ಕೇಸರಿ ಬಣ್ಣ ಇದೆ
- ಭಾರತದ ರಾಷ್ಟ್ರಪಿತ ಎಂದು ಮಹಾತ್ಮ ಗಾಂಧಿಯನ್ನು ಕರೆಯುತ್ತಾರೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ