/newsfirstlive-kannada/media/post_attachments/wp-content/uploads/2024/07/JAISWAL-3.jpg)
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಆಡುವ ಆಟಗಾರರನ್ನು ಬಿಸಿಸಿಐ ದಿಢೀರ್ ಬದಲಾವಣೆ ಮಾಡಿದೆ. ಸಂಜು ಸ್ಯಾಮ್ಸನ್, ಶಿವಂ ದುಬೆ, ಯಶಸ್ವಿ ಜೈಸ್ವಾಲ್ಗೆ ಮೊದಲ ಎರಡು ಪಂದ್ಯಗಳಿಗೆ ಮಾತ್ರ ವಿಶ್ರಾಂತಿ ನೀಡಲಾಗಿದೆ.
ವಿಶ್ವಕಪ್ ತಂಡದಲ್ಲಿದ್ದ ಇವರಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಇವರ ಬದಲಿಗೆ ಸಾಯಿ ಸುದರ್ಶನ್, ಜಿತೇಶ್ ಶರ್ಮಾ, ಹರ್ಷಿತ್ ರಾಣಾಗೆ ಸ್ಥಾನ ನೀಡಲಾಗಿದೆ. ಜಿಂಬಾಬ್ವೆ ವಿರುದ್ಧ ಭಾರತ ಒಟ್ಟು ಐದು ಟಿ-20 ಪಂದ್ಯಗಳನ್ನು ಆಡಲಿದೆ. ಜುಲೈ 6 ರಂದು ಮೊದಲ ಪಂದ್ಯ ನಡೆಯಲಿದೆ.
ಭಾರತ ತಂಡದಲ್ಲಿ ಯಾಱರು..?
ಶುಬ್ಮನ್ ಗಿಲ್ (ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಆವೇಶ್ ಖಾನ್, ಖಲೀಲ್ ಅಹ್ಮದ್, ಮುಕೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ
ಇದನ್ನೂ ಓದಿ:ವಿಶ್ವಕಪ್ ವೇದಿಕೆಯಲ್ಲೇ ವಿರಾಟ್ ನಿವೃತ್ತಿ ಘೋಷಣೆ.. ಕೊಹ್ಲಿಯಂತೆ ರೋಹಿತ್ ಹಾಗೆ ಮಾಡಲಿಲ್ಲ ಯಾಕೆ ಗೊತ್ತಾ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್