3,000 ಭದ್ರತಾ ಸಿಬ್ಬಂದಿ ಕ್ರೀಡಾಂಗಣದೊಳಗೆ ನಿಯೋಜನೆಗೊಂಡಿದ್ದಾರೆ
ಪ್ರಧಾನಿ ಮೋದಿ ಜೊತೆಗೆ ಆಸ್ಟ್ರೇಲಿಯಾ ಉಪ ಪ್ರಧಾನಿ ಆಗಮಿಸಲಿದ್ದಾರೆ
ಮಧ್ಯಾಹ್ನ 2 ಗಂಟೆಗೆ INDvsAUS ಫೈನಲ್ ಪಂದ್ಯ ಆರಂಭವಾಗಲಿದೆ
ಇಂದು ನಡೆಯಲಿಕ್ಕಿರುವ ಇಂಡಿಯಾ ಮತ್ತು ಆಸ್ಟ್ರೇಲಿಯಾ ಪಂದ್ಯ ವೀಕ್ಷಿಸಲು ಲಕ್ಷಾಂತರ ಅಭಿಮಾನಿಗಳು ಸ್ಟೇಡಿಯಂಗೆ ಬರಳಿದ್ದು, ಹೀಗಾಗಿ ಎಲ್ಲೆಡೆ ಭದ್ರತೆಗಾಗಿ ಹೆಚ್ಚು ಒತ್ತು ನೀಡಲಾಗಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾ ಉಪ ಪ್ರಧಾನಿ ರಿಚರ್ಸ್ ಮಾರ್ಲ್ಸ್ ಸೇರಿದಂತೆ ಅನೇಕ ಗಣ್ಯರು ಪಂದ್ಯ ವೀಕ್ಷಿಸಲು ಬರಲಿದ್ದಾರೆ. ಹೀಗಾಗಿ ಒಟ್ಟು 6 ಸಾವಿರಕ್ಕೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅಹಮದಾಬಾದ್ ಪೊಲಿಸ್ ಕಮಿಷನರ್ ಜಿಎಸ್ ಮಲಿಕ್, ‘‘ಈ ಬಗ್ಗೆ ಮಾತನಾಡಿದ್ದು, ವಿಶ್ವಕಪ್ ಫೈನಲ್ ಪಂದ್ಯಕ್ಕೆ 6 ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’’ ಎಂದು ಹೇಳಿದ್ದಾರೆ. ನಂತರ ಮಾತನಾಡಿದ ಅವರು, ‘‘ಒಂದು ಲಕ್ಷಕ್ಕೂ ಅಧಿಕ ಜನರ ಈ ಪಂದ್ಯವನ್ನು ವೀಕ್ಷಿಸಲು ಬರಲಿದ್ದಾರೆ. ಜೊತೆಗೆ ಹಲವು ಗಣ್ಯರ ಉಪಸ್ಥಿತಿ ಇರಲಿದೆ. ಹೀಗಾಗಿ ಗುಜರಾತ್ ಪೊಲಿಸರು, ಆರ್ಎಎಫ್, ಗೃಹ ರಕ್ಷಕರು ಮತ್ತು ಇತರ ಸಿಬ್ಬಂದಿಗಳೊಂದಿಗೆ ಭದ್ರತಾ ವ್ಯವಸ್ಥೆ ಮಾಡಲಾಗಿದೆ’’ ಎಂದು ಹೇಳಿದ್ದಾರೆ.
“6,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಅದರಲ್ಲಿ ಸುಮಾರು 3,000 ಮಂದಿ ಕ್ರೀಡಾಂಗಣದೊಳಗೆ ನೆಲೆಸಿದ್ದಾರೆ. ಇತರ ಆಟಗಾರರು ಇರುವ ಹೋಟೆಲ್‌ಗಳಂತಹ ಇತರ ಪ್ರಮುಖ ಸ್ಥಳಗಳಲ್ಲಿ ಕಾವಲು ಕಾಯಲು ನಿಯೋಜಿಸಲಾಗಿದೆ’’ ಎಂದು ಜಿಎಸ್ ಮಲಿಕ್ ಹೇಳಿದ್ದಾರೆ.
ಪಂದ್ಯದ ಸಮಯದಲ್ಲಿ ಯಾವುದೇ ರಾಸಾಯನಿಕ, ಜೈವಿಕ, ವಿಕಿರಣಶಾಸ್ತ್ರ ಮತ್ತು ಪರಮಾಣುಗಳನ್ನು ಪತ್ತೆಹಚ್ಚಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ತಂಡಗಳನ್ನು ರಚಿಸಿದೆ. ಅಹಮದಾಬಾದ್ ನಗರದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ, ಸಿಂಗಾಪುರದ ಗೃಹ ಮತ್ತು ಕಾನೂನು ಸಚಿವ ಕೆ. ಷಣ್ಮುಗಂ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ, ಮೇಘಾಲಯ ಸಿಎಂ ಸೇರಿದಂತೆ ಇತರ ಗಣ್ಯರು ಪಂದ್ಯ ವೀಕ್ಷಿಸಲು ಆಗಮಿಸುವ ನಿರೀಕ್ಷೆಯಿದೆ. ಮೋದಿ ಸ್ಟೇಡಿಯಂನಲ್ಲಿ 1.32 ಲಕ್ಷ ಸಾಮರ್ಥ್ಯದಷ್ಟು ವೀಕ್ಷಕರು ಪಂದ್ಯ ವೀಕ್ಷಿಸಬಹುದಾಗಿದ್ದು, ಮಧ್ಯಾಹ್ನ 2 ಗಂಟೆಗೆ ಫೈನಲ್ ಪಂದ್ಯ ಆರಂಭವಾಗಲಿದೆ.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ