INDvsPAK: ಭಾರತದ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯ; ಪಾಕಿಸ್ತಾನಕ್ಕೆ ಡಬಲ್ ಟೆನ್ಷನ್!

author-image
admin
Updated On
ಟೀಮ್ ಇಂಡಿಯಾ ಪಾಕ್ ಪ್ರವಾಸ ಮಾಡುತ್ತಾ.. ಇಲ್ಲ, ಚಾಂಪಿಯನ್ಸ್ ಟ್ರೋಫಿಯಿಂದಲೇ ಹಿಂದೆ ಸರಿಯುತ್ತಾ?
Advertisment
  • ಗೆಲ್ಲುವ ವಿಶ್ವಾಸದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ
  • ಪಾಕಿಸ್ತಾನಕ್ಕೆ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳ ಹೀನಾಯ ಸೋಲು
  • ಚಾಂಪಿಯನ್ ಟ್ರೋಫಿ ಗ್ರೂಪ್ Aನಲ್ಲಿ ಇಂದು ರೋಚಕ ಹಣಾಹಣಿ

ಇಂದು ಐಸಿಸಿ ಚಾಂಪಿಯನ್ ಟ್ರೋಫಿಯ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬಹು ನಿರೀಕ್ಷಿತ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಮುಖಾಮುಖಿಯಾಗಲಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಬಾಂಗ್ಲಾದೇಶ ವಿರುದ್ಧ 6 ವಿಕೆಟ್​ಗಳ ಗೆಲುವು ಸಾಧಿಸಿ ಮತ್ತೊಂದು ಜಯದ ಆತ್ಮವಿಶ್ವಾಸದಲ್ಲಿದೆ. ಆದರೆ ಪಾಕಿಸ್ತಾನ ಮಾಡು ಇಲ್ಲವೇ ಮಡಿ ಪಂದ್ಯಕ್ಕಾಗಿ ಇಂದು ಕಣಕ್ಕಿಳಿಯುತ್ತಿದೆ.

ಇದನ್ನೂ ಓದಿ: ಭಾರತದ ರಾಷ್ಟ್ರಗೀತೆ ಕೇಳಿಯೇ ಶಾಕ್ ಆದ ಪಾಕಿಸ್ತಾನದ ಸ್ಟೇಡಿಯಂ; ವಿಡಿಯೋ ಫುಲ್‌ ವೈರಲ್‌! 

ಕಳೆದ ಪಂದ್ಯದಲ್ಲಿ ಪಾಕಿಸ್ತಾನ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳ ಹೀನಾಯ ಸೋಲಿನಿಂದ ಕಂಗೆಟ್ಟಿದೆ. ಚಾಂಪಿಯನ್ ಟ್ರೋಫಿ ಗ್ರೂಪ್ Aನಲ್ಲಿ ಸೆಮಿಫೈನಲ್ ಪ್ರವೇಶಿಸಲು ಪಾಕಿಸ್ತಾನಕ್ಕೆ ಇವತ್ತಿನ ಪಂದ್ಯ ಮಹತ್ವದ್ದಾಗಿದೆ.
ಒಂದು ವೇಳೆ ಭಾರತ ಗೆಲುವು ಸಾಧಿಸಿದರೆ ಬಹುತೇಕ ಸೆಮಿಫೈನಲ್ ಪ್ರವೇಶಿಸಲಿದೆ. ಪಾಕಿಸ್ತಾನ ಸೋತರೆ ಈ ಬಾರಿಯ ಚಾಂಪಿಯನ್ ಟ್ರೋಫಿಯಿಂದಲೇ ಹೊರಗುಳಿಯುವ ಸಾಧ್ಯತೆ ನಿಚ್ಚಳವಾಗಿದೆ. ತವರಿನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಭಂಗ ಅನುಭವಿಸಿದ ಅಪಕೀರ್ತಿಗೆ ಪಾತ್ರವಾಗಲಿದೆ.

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ಹಲವಾರು ಲೆಕ್ಕಾಚಾರಗಳು ಆರಂಭವಾಗಿದ್ದು, ಚಾಂಪಿಯನ್ಸ್ ಟ್ರೋಫಿ ಕಾದಾಟದಲ್ಲಿ ಎರಡೂ ತಂಡಗಳು ಬಲಿಷ್ಠ ಆಗಿವೆ. 2 ತಂಡಗಳ ಬಲಾಬಲದ ಮೇಲೆ ಯಾರು ಗೆಲ್ತಾರೆ ಅನ್ನೋದು ಸಾಕಷ್ಟು ಕುತೂಹಲ ಕೆರಳಿಸಿದೆ.

publive-image

ಸಂಭಾವನೀಯ ಟೀಂ ಇಂಡಿಯಾ!
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್ / ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.

ಸಂಭಾವನೀಯ ಪಾಕ್‌ ಆಟಗಾರರು
ಬಾಬರ್ ಅಜಮ್, ಇಮಾಮ್-ಉಲ್-ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ & WK), ಸಲ್ಮಾನ್ ಅಲಿ ಅಘಾ, ತಯ್ಯಬ್ ತಾಹಿರ್, ಖುಷ್ದಿಲ್ ಶಾ, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ 

Advertisment