/newsfirstlive-kannada/media/post_attachments/wp-content/uploads/2025/01/infosys.jpg)
ಐಟಿ ಕಂಪನಿಯ ಕೆಲಸ ಮಾಡಲು ಇಚ್ಛಿಸುವ ನವ ಯುವಕ, ಯವತಿಯರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ನೀವೇನಾದರೂ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡಲು ಬಯಸಿದರೆ ಈಗಲೇ ಸಿದ್ಧತೆ ಮಾಡಿಕೊಳ್ಳಿ. ಏಕೆಂದರೆ ಬೃಹತ್ ಮಟ್ಟದಲ್ಲಿ ಹೊಸಬರನ್ನು ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲು ಇನ್ಫೋಸಿಸ್ ಕಂಪನಿ ಯೋಜನೆ ರೂಪಿಸಿದೆ ಎನ್ನುವ ಅಧಿಕೃತ ಮಾಹಿತಿ ಹೊರ ಬಿದ್ದಿದೆ.
ಭಾರತದ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯಾಗಿರುವ ಇನ್ಫೋಸಿಸ್ ಸಂಸ್ಥೆ 20,000ಕ್ಕೂ ಹೆಚ್ಚು ಫ್ರೆಶರ್ ಅಭ್ಯರ್ಥಿಗಳನ್ನು ನೇಮಕ ಮಾಡಲು ಯೋಜನೆ ರೂಪಿಸಿದೆಯಂತೆ. 2026ರ ವರ್ಷದಲ್ಲಿ ಕಂಪನಿಯು ದೊಡ್ಡ ಮಟ್ಟದಲ್ಲಿ ನೇಮಕಾತಿ ಮಾಡು ಪ್ಲಾನ್ನಲ್ಲಿದೆ. Q3 ಹಣಕಾಸು ಯೋಜನೆ (ಕಾರ್ಪೊರೇಟ್ನಲ್ಲಿ ಜನವರಿಯಿಂದ ಸೆಪ್ಟೆಂಬರ್ವರೆಗೆ ತಿಂಗಳುಗಳನ್ನು ವಿಂಗಡಿಸಿ Q3 ಎಂದು ಕರೆಯುತ್ತಾರೆ) ರೂಪಿಸಲಾಗಿದೆ ಎಂದು ಕಾರ್ಯನಿರ್ವಾಹಕರೊಬ್ಬರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:400ಕ್ಕೂ ಹೆಚ್ಚು ಹುದ್ದೆಗಳನ್ನ ಆಹ್ವಾನಿಸಿದ ಕೋಲ್ ಇಂಡಿಯಾ ಲಿಮಿಟೆಡ್.. ಕೂಡಲೇ ಅಪ್ಲೇ ಮಾಡಿ
ದೇಶದ 2ನೇ ಅತಿದೊಡ್ಡ ಸಾಫ್ಟ್‌ವೇರ್ ಸೇವೆಗಳ ರಫ್ತುದಾರ ಆಗಿರುವ ಇನ್ಫೋಸಿಸ್, ಪಾಶ್ಚಿಮಾತ್ಯ ರಾಷ್ಟ್ರಗಳ ಮಾರುಕಟ್ಟೆಯಿಂದ ತನ್ನ ಆದಾಯದ 80 ಪ್ರತಿಶತಕ್ಕಿಂತ ಹೆಚ್ಚು ಹಣ ಗಳಿಸುತ್ತದೆ. ಮುಂದಿನ ದಿನಗಳಲ್ಲಿ ಕಂಪನಿಯನ್ನು ಇನ್ನಷ್ಟು ಬಲಯುತವಾಗಿ ಮಾಡಲು ಹೊಸಬರ ಅವಶ್ಯಕತೆ ಇದೆ. ದೊಡ್ಡ ಮಟ್ಟದ ಗೆಲುವು ಸಾಧಿಸಬೇಕಾದರೆ ಕಂಪನಿಗೆ ಉದ್ಯೋಗಿಗಳು ಪ್ರಮುಖ ಪಾತ್ರ ವಹಿಸುತ್ತಾರೆ.
ಇಂಜಿನಿಯರಿಂಗ್ ಪದವೀಧರರು ಈ ಹಿಂದಿನ ಕೆಲ ವರ್ಷಗಳಲ್ಲಿ ಉದ್ಯೋಗವನ್ನು ಕಳೆದುಕೊಂಡಿದ್ದರು. ಆದರೆ ಈಗ ಎಲ್ಲ ಕಂಪನಿಗಳು ನಿಧಾನ ಗತಿಯಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿವೆ. ಅದರಂತೆ ಇನ್ಫೋಸಿಸ್ ಕೂಡ 20 ಸಾವಿರಕ್ಕೂ ಅಧಿಕ ಹೊಸ ಉದ್ಯೋಗಿಗಳನ್ನು ಕಂಪನಿಗೆ ಸೇರ್ಪಡೆ ಮಾಡಿಕೊಳ್ಳಲು ಪ್ಲಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ