ಬೆಳ್ಳಂಬೆಳಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು; ರೌಡಿ ಶೀಟರ್ ಕಾಲಿಗೆ ಗುಂಡೇಟು

author-image
Veena Gangani
Updated On
ಬೆಳ್ಳಂಬೆಳಗ್ಗೆ ಮಂಡ್ಯದಲ್ಲಿ ಗುಂಡಿನ ಸದ್ದು; ರೌಡಿ ಶೀಟರ್ ಕಾಲಿಗೆ ಗುಂಡೇಟು
Advertisment
  • ತಾಲೂಕಿನ ಚಿಕ್ಕಮಲಗೂಡು ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು
  • ಮುತ್ತುರಾಜು ಅಲಿಯಾಸ್ ‌ಡಕ್ಕ ಎಂಬಾತನ ಮೇಲೆ ಪೊಲೀಸ್ ಫೈರಿಂಗ್
  • ಇನ್ಸ್ ಪೆಕ್ಟರ್ ಶ್ರೀಧರ್ ಆರೋಪಿ ಮೇಲೆ ಗುಂಡು ಹಾರಿಸಿದ್ದೇಕೆ ಗೊತ್ತಾ?

ಮಂಡ್ಯ: ಬೆಳ್ಳಂಬೆಳಿಗ್ಗೆ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರೋ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಮಲಗೂಡು ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ: ಅಪಾಯದಲ್ಲಿ ತುಂಗಭದ್ರಾ ಡ್ಯಾಂ​.. ಜಲಾಶಯದ ಬಳಿ ಓಡೋಡಿ ಬಂದ ಶಾಸಕ ಗವಿಯಪ್ಪ, ರಾಘವೇಂದ್ರ ಹಿಟ್ನಾಳ್

ಮುತ್ತುರಾಜು ಅಲಿಯಾಸ್ ‌ಡಕ್ಕ ಎಂಬಾತನ ಮೇಲೆ ಹಲಗೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನ ಹಿಡಿಯಲು ಹೋಗಿದ್ದರು.

publive-image

ಈ ವೇಳೆ ಪೊಲೀಸ್ ಪೇದೆ ಸಿದ್ದರಾಜು ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ಆರೋಪಿ ಬಲಗಾಲಿಗೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ. ಪರಿಣಾಮ ಗಾಯಗೊಂಡ ರೌಡಿಶೀಟರ್​ ಅನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment