newsfirstkannada.com

ಇವತ್ತು ಅಂತಾರಾಷ್ಟ್ರೀಯ ‘ಪ್ರಜಾಪ್ರಭುತ್ವ’ದ ದಿನ; ಸಿದ್ದರಾಮಯ್ಯ ಸರ್ಕಾರದಿಂದ ಮಹತ್ವದ ಕಾರ್ಯಕ್ರಮ

Share :

15-09-2023

  ರಾಜ್ಯದಲ್ಲಿ ‘ಸಂವಿಧಾನ ಪೀಠಿಕೆ’ ಓದುವ ಕಾರ್ಯಕ್ರಮ

  ರಾಜ್ಯಾದ್ಯಂತ ಸುಮಾರು 2 ಕೋಟಿಗೂ ಹೆಚ್ಚು ಜನ ಭಾಗಿ

  ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರೋ ಆಡಳಿತ ವ್ಯವಸ್ಥೆ ಇರೋ ದೇಶ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ಕರ್ನಾಟಕ ಸರ್ಕಾರ ಮಹತ್ವದ ಕಾರ್ಯಕ್ರಮವನ್ನ ಕೈಗೊಂಡಿದೆ. ಇವತ್ತು ರಾಜ್ಯಾದ್ಯಂತ ಸಂವಿಧಾನದ ಸ್ತ್ರೋತ್ರ ನಡೆಸಲು ಮುಂದಾಗಿದೆ.

ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವದ ಸ್ಥಿತಿಯನ್ನು ಪ್ರತಿಬಿಂಬಿಸುವ ಮಹತ್ವದ ದಿನ. ಈ ದಿನದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನ ಇಟ್ಟಿದೆ. ಇವತ್ತು ದೇಶದ ಸಂವಿಧಾನಕ್ಕೆ ಗೌರವ ಸಲ್ಲಿಸಲಿದೆ.

ಇವತ್ತು ಅಂತಾರಾಷ್ಟ್ರೀಯ ‘ಪ್ರಜಾಪ್ರಭುತ್ವ’ದ ದಿನ

ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯದಂತೆ ನಡೆಯಬೇಕೆಂಬ ಉದ್ದೇಶದಿಂದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ವೇಳೆ ರಾಜ್ಯಾದ್ಯಂತ ಸುಮಾರು 2 ಕೋಟಿಗೂ ಹೆಚ್ಚು ಜನರು ಪಾಲ್ಗೊಂಡು ಏಕ ಧ್ವನಿಯಲ್ಲಿ ಸಂವಿಧಾನದ ಪೀಠಿಕೆಯನ್ನ ಓದಿ ದಾಖಲೆ ಬರೆಯಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಇವತ್ತು ಬೆಳಗ್ಗೆ 9.30ಕ್ಕೆ ಚಾಲನೆ ಸಿಗಲಿದೆ. ವಿಧಾನಸೌಧ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಚ್‌.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಬಿ.ನಾಗಂದ್ರ, ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳು ಪಾಲ್ಗೊಂಡು, ಸಂವಿಧಾನದ ಪೀಠಿಕೆ ಓದಲಿದ್ದಾರೆ. ಭಾರತ ಸಂವಿಧಾನದ ಪೀಠಿಕೆ ಓದಲು ರಾಜ್ಯ ಸರ್ಕಾರ ಎಲ್ಲರಿಗೂ ಅವಕಾಶ ನೀಡಿದ್ದು, ಕಾರ್ಯಕ್ರಮದಲ್ಲಿ ಜನರು, ವಿದ್ಯಾರ್ಥಿಗಳು, ಸರ್ಕಾರಿ ಕಚೇರಿ, ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಆನ್‍ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳುವ ಅವಕಾಶ ನೀಡಿತ್ತು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು, ಶಾಲೆ, ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮ ನಡೆಯಲಿದೆ. ಪ್ರತಿಯೊಬ್ಬ ಪ್ರಜೆಗಳು, ನಮ್ಮ ವಿದ್ಯಾರ್ಥಿಗಳಿಗೆ ಸಂವಿಧಾನದ ಉದ್ದೇಶ ಅರ್ಥ ಆಗಬೇಕು ಈ ಹಿನ್ನೆಲೆಯಲ್ಲಿ ಇಂತಹದ್ದೊಂದು ಮಹತ್ವದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸುಮಾರು 2 ಕೋಟಿಗೂ ಹೆಚ್ಚು ಜನರು ಏಕಧ್ವನಿಯಲ್ಲಿ ಸಂವಿಧಾನ ಪೀಠಿಕೆ ಓದಲಿದ್ದಾರೆ ಅಂತ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದ ಯಶಸ್ಸಿನ ಬಗ್ಗೆ ಪೀಠಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಎಲ್ಲರೂ ಸೋದರತೆಯಿಂದ ಬಾಳಲು ಇದು ಉಪಯೋಗವಾಗಬೇಕಿದೆ. ಇದು ಜಾತಿ, ಧರ್ಮಗಳ ನಡುವೆ ಸಂಘರ್ಷ ತಪ್ಪಿಸೋ ಉದ್ದೇಶ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮಹತ್ವದ ಕಾರ್ಯ ಮಾಡುತ್ತಿದೆ. ಈ ಮೂಲಕ ಯುವ ಪೀಳಿಗೆಗೆ ಸಂವಿಧಾನದ ಅರಿವು ಮೂಡಿಸಲು ಮುಂದಾಗಿದೆ.

ವಿಶೇಷ ವರದಿ: ಹರೀಶ್ ಕಾಕೋಳ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇವತ್ತು ಅಂತಾರಾಷ್ಟ್ರೀಯ ‘ಪ್ರಜಾಪ್ರಭುತ್ವ’ದ ದಿನ; ಸಿದ್ದರಾಮಯ್ಯ ಸರ್ಕಾರದಿಂದ ಮಹತ್ವದ ಕಾರ್ಯಕ್ರಮ

https://newsfirstlive.com/wp-content/uploads/2023/08/DKS_SIDDU.jpg

Load More