ವಿಶ್ವಸಂಸ್ಥೆ ಆವರಣದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಭಾಗಿ
135 ದೇಶಗಳ ಪ್ರತಿನಿಧಿಗಳು ಭಾಗಿ, ಗಿನ್ನಿಸ್ ದಾಖಲೆ ಬರೆದ ಯೋಗಾ ಡೇ!
ಇಂದು ವಿಶ್ವಸಂಸ್ಥೆ ಆವರಣದಲ್ಲಿ ನಡೆದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಗಿನ್ನಿಸ್ ದಾಖಲೆ ಬರೆದಿದೆ. ಈ ಹಿಂದೆ ನಡೆದಿದ್ದ ಅತೀ ದೊಡ್ಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಕೇವಲ 100 ದೇಶಗಳ ಪ್ರಜೆಗಳು ಭಾಗಿಯಾಗಿದ್ದರು. ಆದರೆ, ಇಂದಿನ ಭಾರತದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 135 ದೇಶಗಳ ಪ್ರಜೆಗಳು ಭಾಗಿಯಾಗುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
ಕಾರ್ಯಕ್ರಮದಲ್ಲಿ 140 ದೇಶಗಳ ಪ್ರಜೆಗಳು ಭಾಗಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ, ಕಾರ್ಯಕ್ರಮದಲ್ಲಿ ಅಧಿಕೃತವಾಗಿ 135 ದೇಶಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಇದೊಂದು ಗಿನ್ನಿಸ್ ದಾಖಲೆ ಎಂದು ವಿಶ್ವ ಗಿನ್ನಿಸ್ ದಾಖಲೆ ಸಂಸ್ಥೆಯ ಅಧಿಕಾರಿ ಮೈಕೆಲ್ ಎಂಪ್ರಿಕ್ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಹಾಲಿವುಡ್ ಸ್ಟಾರ್ಸ್, ಫೇಮಸ್ ಸಿಂಗರ್ಸ್, ಪೊಲಿಟಿಕಲ್ ಲೀಡರ್ಸ್ ಸೇರಿದಂತೆ ಖ್ಯಾತ ಯೋಗ ಗುರುಗಳು ಭಾಗಿಯಾಗಿದ್ದರು. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಮೆರುಗು ತಂದರು. ಅಲ್ಲದೇ ಒಂದೇ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಯೋಗಾಭ್ಯಾಸ ಮಾಡಿದ್ರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ