Advertisment

ಭಯಾನಕ ಕಾರು ಬಾಂಬ್​ ಸ್ಫೋಟ.. 10 ಜನ ಬಲಿ, 19ಕ್ಕೂ ಹೆಚ್ಚು ಮಂದಿ ಗಂಭೀರ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕ್ವೆಟ್ಟಾ ನಗರದಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಗಳ, ಕಮರ್ಷಿಯಲ್​ ಕಟ್ಟಡಗಳ ಗೋಡೆಗಳು ಬಿರುಕು ಬಿಟ್ಟಿದ್ದು ಕಿಟಕಿಯ ಗ್ಲಾಸ್​ಗಳು ಹೊಡೆದು ಹೋಗಿವೆ.

author-image
Bhimappa
PAK_CAR
Advertisment

ಭೀಕರವಾಗಿ ಕಾರು ಬಾಂಬ್ ಸ್ಫೋಟಗೊಂಡು ಸ್ಥಳದಲ್ಲೇ 10 ಜನರ ಜೀವ ಹೋಗಿದ್ದು 19ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ಕ್ವೆಟ್ಟಾ ನಗರದ ಫ್ರಾಂಟಿಯರ್ ಕಾನ್​ಸ್ಟಾಬ್ಯುಲರಿ (Frontier Constabulary) ಪ್ರಧಾನ ಕಚೇರಿ ಬಳಿ ಈ ಘಟನೆ ನಡೆದಿದೆ. 

Advertisment

ಮಾಹಿತಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕ್ವೆಟ್ಟಾ ನಗರದಲ್ಲಿ ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಗಳ, ಕಮರ್ಷಿಯಲ್​ ಕಟ್ಟಡಗಳ ಗೋಡೆಗಳು ಬಿರುಕು ಬಿಟ್ಟಿದ್ದು ಕಿಟಕಿಯ ಗ್ಲಾಸ್​ಗಳು ಹೊಡೆದು ಹೋಗಿವೆ. ಅಲ್ಲದೇ ಸ್ಫೋಟವಾಗುತ್ತಿದ್ದಂತೆ ಸ್ಥಳದಲ್ಲಿ ಗುಂಡಿನ ಚಕಮಕಿಯೂ ನಡೆದಿದೆ ಎನ್ನಲಾಗಿದೆ. ಹೀಗಾಗಿ ಘಟನಾ ಸ್ಥಳದಲ್ಲೇ ಸದ್ಯ ಆತಂಕದ ವಾತಾವರಣ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ: ಕಾಂತಾರ ಪ್ರೀಕ್ವೆಲ್; 1,000 ಕೋಟಿ ರೂಪಾಯಿ ನಿರೀಕ್ಷೆ.. ಭಾಗ- 2 ಬಾಕ್ಸ್​ ಆಫೀಸ್​ ಕಲೆಕ್ಷನ್​ ಎಷ್ಟು..?

PAK_CAR_1

ಕಾರು ಬಾಂಬ್ ಸ್ಫೋಟ ಮಾಡಿದವರು ಯಾರು, ಯಾಕೆ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಇದುವರೆಗೂ ತಿಳಿದು ಬಂದಿಲ್ಲ. ಈ ಸಂಬಂಧ ಬಲೂಚಿಸ್ತಾನ್​ದ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕಾರ್ ಮಾತನಾಡಿ, ಘಟನೆಯಲ್ಲಿ ಇನ್ನು ಸಾವು-ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 

Advertisment

ಬಾಂಬ್ ಸ್ಫೋಟದ ಹೊಣೆಯನ್ನು ಯಾರು ಕೂಡ ಹೊತ್ತುಕೊಂಡಿಲ್ಲ. ಆದರೆ ಬಲೂಚಿಸ್ತಾನದ ಪ್ರತ್ಯೇಕವಾದಿಗಳು ಈ ಕೃತ್ಯ ಎಸಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಪ್ರತ್ಯೇಕವಾದಿಗಳು ಸ್ವಾಂತತ್ರ್ಯಾಕ್ಕಾಗಿ ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಈ ದಾಳಿ ನಡೆಸಿರಬಹುದು ಎಂದು ಹೇಳಲಾಗುತ್ತಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

PAKISTAN FLOOD pakistan
Advertisment
Advertisment
Advertisment