/newsfirstlive-kannada/media/post_attachments/wp-content/uploads/2025/02/SECONDARY-SCHOOL-INTERNET.jpg)
ದೇಶದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಶಿಕ್ಷಣ ವಲಯದಲ್ಲಿ ಸಂಪೂರ್ಣ ಬದಲಾವಣೆ ತರುವ ವಿಚಾರದಲ್ಲಿ ಎಲ್ಲಾ ಸರ್ಕಾರಿ ಸೆಕಂಡರಿ ಸ್ಕೂಲ್ಗಲಿಗೆ ಬ್ರಾಡ್ಬ್ಯಾಂಡ್ ಕನೆಕ್ಟಿವಿಟಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಒಟ್ಟು 50 ಸಾವಿರ ಟಿಂಕರಿಂಗ್ ಲ್ಯಾಭ್ಗಳನ್ನ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಲಾಗುವುದು. ಇದರ ಮೂಲಕ ವಿದ್ಯಾರ್ಥಿಗಳ ಕಲಿಕೆಯಲ್ಲಿ ವೈಜ್ಞಾನಿಕತೆ ಮತ್ತು ಕುತೂಹಲವನ್ನು ಹೆಚ್ಚಿಸುವ ಉದ್ದೇಶವಿದೆ ಎಂದು ಹೇಳಲಾಗಿದೆ. ಅದು ಮಾತ್ರವಲ್ಲ ಸ್ವತಂತ್ರ ಭಾರತೀಯ ಭಾಷಾ ಪುಸ್ತಕ ಯೋಜನೆಯನ್ನು ತರಲಾಗುವುದು. ಇದು ವಿದ್ಯಾರ್ಥಿಗಳಿಗೆ ವಿಷಯಗಳ ಅವರದೇ ಭಾಷೆಯಲ್ಲಿ ಅರ್ಥವಾಗಲು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:MSMEsಗಳ ಅಭಿವೃದ್ಧಿಗೆಗಾಗಿ ಮಹಿಳೆಯರಿಗೆ ಸಾಲದ ಭಾಗ್ಯ.. ಮೊದಲ ಬಾರಿ ಎಸ್ಸಿ/ಎಸ್ಟಿ ಉದ್ಯಮಿಗಳಿಗೆ ಪ್ರೋತ್ಸಾಹ
ಇದರ ಜೊತಗೆ ಐಐಟಿಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಕೂಡ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ 23 ಐಐಟಿಗಳಲ್ಲಿ ಕಲಿಯುವ ವಿದ್ಯಾರ್ಥಿಗಳ ಸಂಖ್ಯೆ ಶೇಕಡಾ 100ರಷ್ಟು ಹೆಚ್ಚಾಗಿದೆ. ಇದಕ್ಕಾಗಿ ಹೆಚ್ಚಿನ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. 2024ರ ನಂತರ 5 ಐಐಟಿಗಳನ್ನು ಸ್ಥಾಪಿಸಲಾಗಿದ್ದು ಅಲ್ಲಿ 6,500 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ಸಚಿವೆ ಹೇಳಿದ್ದಾರೆ.
ಇನ್ನು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವವರಿಗಾಗಿ ಸಾಮಾಜಿಕ ಭದ್ರತೆಯ ಯೋಜನೆಯನ್ನು ಕೂಡ ಕಲ್ಪಿಸಲಾಗುವುದು. ಆನ್ಲೈನ್ ವೇದಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗಿಗ್ ವರ್ಕರ್ಸ್ ಬದುಕನ್ನು ಇನ್ನಷ್ಟು ಸುಧಾರಣೆ ಮಾಡಲಾಗುವುದು ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ