/newsfirstlive-kannada/media/post_attachments/wp-content/uploads/2023/11/SIDDU_DKS.jpg)
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಡಾ ಹಗರಣವನ್ನು ಇಟ್ಟುಕೊಂಡು ಸರ್ಕಾರದ ಬುಡವನ್ನು ಅಲುಗಾಡಿಸುತ್ತಿದ್ದಾರೆ. ವಿಪಕ್ಷಗಳ ಹೋರಾಟದ ಬಲ ಕುಗ್ಗಿಸಲು ಕಾಂಗ್ರೆಸ್​ ನಾನಾ ಪ್ರಯತ್ನಗಳನ್ನು ಮಾಡಿತ್ತು. ಅದ್ಯಾವುದು ಅಷ್ಟರ ಮಟ್ಟಿಗೆ ವರ್ಕೌಟ್ ಆಗಿರಲಿಲ್ಲ. ಆದ್ರೀಗ ವಿಪಕ್ಷಗಳ ವಿರುದ್ಧ ಮುಗಿ ಬೀಳಲು ಸರ್ಕಾರದ ಕೈಗೆ ಬ್ರಹ್ಮಾಸ್ತ್ರವೇ ಸಿಕ್ಕಿದೆ.
/newsfirstlive-kannada/media/post_attachments/wp-content/uploads/2024/08/cm-siddu-1.jpg)
ಬಿಜೆಪಿ ಆಡಳಿತದ ಅವಧಿಯಲ್ಲಿ ಕೋವಿಡ್ ಪರಿಕರಗಳ ಖರೀದಿಯಲ್ಲಿ 2 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಕಾಂಗ್ರೆಸ್​ ಆರೋಪಿಸಿತ್ತು. ವಿಧಾನಸಭೆ ಚುನಾವಣೆ ವೇಳೆ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಿ ರಾಜ್ಯದ ಗಮನವನ್ನು ಸೆಳೆದಿತ್ತು. ಅಷ್ಟೇ ಅಲ್ಲ ಅಧಿಕಾರಕ್ಕೆ ಬಂದ ಬಳಿಕ ಕೋವಿಡ್​ ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಿ ಆಯೋಗವನ್ನು ರಚಿಸಿತ್ತು. ಇದೀಗ ತನಿಖಾ ಆಯೋಗ ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಭೇಟಿ ಮಾಡಿದ ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ, ಕೋವಿಡ್​ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಿದ್ರು.
/newsfirstlive-kannada/media/post_attachments/wp-content/uploads/2024/08/BJP-JDS-PADAYATRE.jpg)
ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ಬಗೆಗಿನ ಮಧ್ಯಂತರ ತನಿಖಾ ವರದಿ ಸರ್ಕಾರದ ಕೈ ಸೇರಿದೆ. ಜಸ್ಟೀಸ್ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಸುಮಾರು 1722 ಪುಟಗಳ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗಿದೆ. ಈ ಮಧ್ಯಂತರ ವರದಿಯಲ್ಲಿ ಭ್ರಷ್ಟಾಚಾರದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕ್ಷೇತ್ರಾವಾರು ಎಷ್ಟೆಷ್ಟು ಹಣ ಖರ್ಚು ಮಾಡಲಾಗಿದೆ ಎಂದು ತೋರಿಸಿದರೂ ಕೆಲಸವೇ ಆಗಿಲ್ಲ ಎಂದು ಉಲ್ಲೇಖಸಲಾಗಿದೆ. ಹಾಗೂ ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್ ಕೇಸ್​ ದಾಖಲಿಸುವಂತೆ ತನಿಖಾ ತಂಡ ವರದಿಯಲ್ಲಿ ಶಿಫಾರಸು ಮಾಡಿದೆ.
ಕೋವಿಡ್​ ಹಗರಣದ ಬಗ್ಗೆ ವರದಿ ಸರ್ಕಾರ ಕೈಸೇರಿದ ಬೆನ್ನಲ್ಲೇ ಬಿಜೆಪಿಗರಲ್ಲಿ ಢವಢವ ಶುರುವಾಗಿದೆ. ಕಳೆದ ರಾತ್ರಿ ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ, ಸಚಿವ ಎಂ.ಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವು ಸಚಿವರು ಸಮಾಲೋಚನೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಗುರುವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ವರದಿ ಬಹಿರಂಗಗೊಳಿಸುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಾಜಿ ಸಿಎಂಗಳಾದ ಬಿಎಸ್​ವೈ, ಬೊಮ್ಮಾಯಿ ಮತ್ತು ಮಾಜಿ ಆರೋಗ್ಯ ಸಚಿವ ಡಿ.ಸುಧಾಕರ್​ಗೆ ಟೆನ್ಷನ್​ ಹೆಚ್ಚಾಗಿದೆ.
/newsfirstlive-kannada/media/post_attachments/wp-content/uploads/2024/03/Dr-K-Sudhakar.jpg)
ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಲ್ಮೀಕಿ ಹಗರಣ, ಮುಡಾ ಹಗರಣದ ಬಗ್ಗೆ ದೊಡ್ಡಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಇದು ಆಘಾತ ನೀಡುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us