ಫೈನಲ್ನಲ್ಲಿ ಪ್ಲೇಯರ್ ಆಫ್ ದೀ ಮ್ಯಾಚ್ ಪ್ರಶಸ್ತಿ ಪಡೆದಿದ್ದರು
ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿ ಈಗ ಏನು ಹೇಳಲಿಲ್ವಾ?
ಈ ಸಲದ ರಿಟೈನ್ ಲಿಸ್ಟ್ನಲ್ಲಿ ಈ ಪ್ಲೇಯರ್ ಹೆಸರು ಇರಲಿಲ್ಲ
ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 2024ರ ಆಕ್ಷನ್ನಲ್ಲಿ ಕೋಟಿ ಕೋಟಿ ಹಣ ಕೊಟ್ಟು ಖರೀದಿ ಮಾಡಿದ್ದ ಆಸಿಸ್ ಪೇಸ್ ಬೌಲರ್ ಅನ್ನು ಕೈ ಬಿಟ್ಟಿದೆ. ಅಲ್ಲದೇ ಫೈನಲ್ ಪಂದ್ಯ ಗೆಲುವಿಗೆ ಮುಖ್ಯ ಕಾರಣವಾಗಿದ್ದ ಮಿಚೆಲ್ ಸ್ಟಾರ್ಕ್ ಅವರನ್ನು ಕೆಕೆಆರ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿಲ್ಲ. ಈ ಬಗ್ಗೆ ಆಸ್ಟ್ರೇಲಿಯಾ ಪೇಸ್ ಬೌಲರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ ವರ್ಷದ ಮೆಗಾ ಆಕ್ಷನ್ನಲ್ಲಿ ಕೆಕೆಆರ್ ಫ್ರಾಂಚೈಸಿ 24.75 ಕೋಟಿ ರೂಪಾಯಿ ಕೊಟ್ಟು ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿ ಮಾಡಿತ್ತು. ಆದರೆ ಈ ಬಾರಿಯ ರಿಟೈನ್ ಲಿಸ್ಟ್ ರಿಲೀಸ್ ಮಾಡಿರುವ ಫ್ರಾಂಚೈಸಿ ಮಿಚೆಲ್ ಸ್ಟಾರ್ಕ್ ಅವರನ್ನು ಕೈಬಿಟ್ಟಿದೆ. ಈ ಬಗ್ಗೆ ಫ್ರಾಂಚೈಸಿ ಅಧಿಕಾರಿಗಳು, ಮಿಚೆಲ್ ಸ್ಟಾರ್ಕ್ಗೆ ಒಂದೂ ಮಾತನ್ನೂ ತಿಳಿಸಿಲ್ಲ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ನಟ ನಾಗಚೈತನ್ಯ, ಶೋಭಿತಾ ಮದುವೆ ದಿನಾಂಕ ನಿಗದಿ.. ಡೆಸ್ಟಿನೇಶನ್ ವೆಡ್ಡಿಂಗ್ ಎಲ್ಲಿ?
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪೇಸ್ ಬೌಲರ್ ಮಿಚೆಲ್ ಸ್ಟಾರ್ಕ್, ರಿಟೈನ್, ರಿಲೀಸ್ ಕುರಿತು ನಾನು ಕೆಕೆಆರ್ನಿಂದ ಯಾವುದೇ ಮಾಹಿತಿ ಕೇಳಿಲ್ಲ. ಈ ಬಗ್ಗೆ ಅವರ ಬಳಿ ಮಾತನಾಡುತ್ತೇನೆ. ಹೈದರಾಬಾದ್ನ ಟೀಮ್ನಲ್ಲಿನ ಆಸಿಸ್ ಆಟಗಾರರಾದ ಪ್ಯಾಟ್ ಕಮ್ಮಿನ್ಸ್ ಮತ್ತು ಟ್ರಾವಿಸ್ ಹೆಡ್ ಬಿಟ್ಟರೇ ಉಳಿದ ಎಲ್ಲ ಆಸಿಸ್ ಪ್ಲೇಯರ್ಸ್ ಈ ಸಲದ ಹರಾಜಿನಲ್ಲಿ ಇರುತ್ತಾರೆ ಎಂದು ಸ್ಟಾರ್ಕ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು 2024ರ ಟೂರ್ನಿಯಲ್ಲಿ ಕೆಕೆಆರ್ ಪರ ಆಡಿದ್ದ ಮಿಚೆಲ್ ಸ್ಟಾರ್ಕ್ ಸಾಧರಣ ಪ್ರದರ್ಶನ ನೀಡಿದ್ದರು. ಇದು ಫ್ರಾಂಚೈಸಿಗೆ ಇಷ್ಟವಿರಲಿಲ್ಲ. ಕಳೆದ ಟೂರ್ನಿಯಲ್ಲಿ 13 ಪಂದ್ಯಗಳನ್ನು ಆಡಿದ್ದ ಸ್ಟಾರ್ಕ್ 17 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ ಫೈನಲ್ನಲ್ಲಿ ಆಕ್ರಮಣಕಾರಿ ಬೌಲಿಂಗ್ ಮಾಡಿದ್ದ ಅವರು 3 ಓವರ್ನಲ್ಲಿ ಕೇವಲ 14 ರನ್ ನೀಡಿ 2 ಪ್ರಮುಖ ವಿಕೆಟ್ ಪಡೆಯುವ ಮೂಲಕ ಕೆಕೆಆರ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಫೈನಲ್ನಲ್ಲಿ ಪ್ಲೇಯರ್ ಆಫ್ ದೀ ಮ್ಯಾಚ್ ಪ್ರಶಸ್ತಿ ಪಡೆದುಕೊಂಡಿದ್ದರು.
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ