/newsfirstlive-kannada/media/post_attachments/wp-content/uploads/2024/11/RCB_Jacob_Bethell.jpg)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿದವರು ಇಂಗ್ಲೆಂಡ್‌ನ ಯುವ ಸ್ಫೋಟಕ ಬ್ಯಾಟರ್ ಜೇಕಬ್ ಬೆಥೆಲ್. ಇವರು ತಮ್ಮ 2ನೇ ಟೆಸ್ಟ್ ಪಂದ್ಯದಲ್ಲೂ ಅಬ್ಬರದ ಬ್ಯಾಟಿಂಗ್ ಮಾಡಿದ್ದಾರೆ.
ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರೋ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ ಜೇಕಬ್ ಬೆಥೆಲ್ ದಾಖಲೆ ಬರೆದರು. ಇಂಗ್ಲೆಂಡ್ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೆಥೆಲ್ ಸ್ಪೋಟಕ ಬ್ಯಾಟಿಂಗ್ ಮಾಡಿದ್ರು.
ಭರ್ಜರಿ ಬ್ಯಾಟಿಂಗ್
ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ 21 ವರ್ಷದ ಬೆಥೆಲ್ ನ್ಯೂಜಿಲೆಂಡ್ ಬೌಲರ್ಗಳ ಬೆಂಡೆತ್ತಿದ್ರು. ತಾನು ಆಡಿದ 117 ಎಸೆತಗಳಲ್ಲಿ 96 ರನ್ ಕಲೆ ಹಾಕಿದ ಇವರು ಟಿಮ್ ಸೌಥಿ ಎಸೆತದಲ್ಲಿ ಕ್ಯಾಚ್ ನೀಡಿದ್ರು. ಕೇವಲ 4 ರನ್ಗಳಿಂದ ಶತಕ ವಂಚಿತರಾದ್ರು. ಈ ಪೈಕಿ ಬರೋಬ್ಬರಿ 3 ಭರ್ಜರಿ ಸಿಕ್ಸರ್, 10 ಫೋರ್ ಸಿಡಿಸಿದ್ರು.
ಈ ಹಿಂದೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಜೇಕಬ್ ಅದ್ಭುತ ಪ್ರದರ್ಶನ ನೀಡಿದ್ರು. ಆರಂಭದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ಜೇಕಬ್ 37 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್‌ಗಳ ನೆರವಿನಿಂದ ಅಜೇಯ 50 ರನ್ ಬಾರಿಸಿದ್ರು. ಈ ಮೂಲಕ ಇಂಗ್ಲೆಂಡ್ ತಂಡದ ಗೆಲುವಿಗೆ ನೆರವಾದರು.
ಆರ್ಸಿಬಿ ಸೇರಿದ್ದ ಜೇಕಬ್
ಇಂಗ್ಲೆಂಡ್ ತಂಡದ ಭರವಸೆಯ ಯುವ ಆಲ್ರೌಂಡರ್ ಜೇಕಬ್. ಇವರಿಗೆ ಕೇವಲ 21 ವರ್ಷ. ಇತ್ತೀಚೆಗೆ ನಡೆದ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬರೋಬ್ಬರಿ 2.6 ಕೋಟಿ ನೀಡಿ ಖರೀದಿ ಮಾಡಿತ್ತು. ಸದ್ಯ ಟೆಸ್ಟ್ನಲ್ಲಿ ಅಬ್ಬರಿಸಿರೋ ಇವರು ಐಪಿಎಲ್ನಲ್ಲೂ ಆರ್ಸಿಬಿ ತಂಡದ ಪರ ಮಿಂಚುವ ನಿರೀಕ್ಷೆಯಲ್ಲಿದ್ದಾರೆ.
ಇದನ್ನೂ ಓದಿ:‘ಮಿತಿ ಮೀರಬಾರ್ದು’- ಸಿರಾಜ್ಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಖಡಕ್ ವಾರ್ನಿಂಗ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ