ಐಪಿಎಲ್​ ಪಂದ್ಯದ ವೇಳೆ ದುಡ್ಡು ಮಾಡಲು ಕಿಲಾಡಿ ಕೆಲಸ.. ಕಂಬಿ ಹಿಂದೆ ಸೇರಿದ 8 ಮಂದಿ..!

author-image
Veena Gangani
Updated On
ಬೆಂಗಳೂರಲ್ಲಿ RCB ಮ್ಯಾಚ್‌.. ಟಿಕೆಟ್‌ ಯಾಕೆ ಸುಲಭಕ್ಕೆ ಸಿಗಲ್ಲ? CCBಯಿಂದ ಸ್ಫೋಟಕ ಸತ್ಯ ಬಯಲು!
Advertisment
  • ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಆರೋಪಿಗಳಿಂದ ಟಿಕೆಟ್ ಮಾರಾಟ
  • IPL ಕ್ರಿಕೆಟ್ ಮ್ಯಾಚ್ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳು
  • ರಾಜಸ್ಥಾನ ಮೂಲದ ಮೂವರು ಖತರ್ನಾಕ್ ಆರೋಪಿಗಳು ಅರೆಸ್ಟ್

ಬೆಂಗಳೂರು: ಆರ್​ಸಿಬಿ ಹಾಗೂ ದೆಹಲಿ ಐಪಿಎಲ್ ಮ್ಯಾಚ್ ಹಿನ್ನಲೆಯಲ್ಲಿ ಬ್ಲಾಕ್​ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಟಿಕೆಟ್ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ: 9 ಸಾವಿರಕ್ಕೂ ಹೆಚ್ಚು ಸಹಾಯಕ ಲೋಕೋ ಪೈಲಟ್ ಹುದ್ದೆಗಳು.. SSLC ಪಾಸ್ ಆಗಿದ್ರೆ ಸಾಕು…!

publive-image

ಇದೇ ಹಿನ್ನಲೆಯಲ್ಲಿ ಸಿಸಿಬಿ ಡಿಸಿಪಿ ಅಕ್ಕಯ್ ಮಚೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಬ್ಲಾಕ್ ಟಿಕೆಟ್ ಮಾರಾಟ ದಂಧೆ ಬಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

publive-image

ಮತ್ತೊಂದು ಕಡೆ ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್ ಬೆಟ್ಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ರಾಜಸ್ಥಾನ ಮೂಲದ ಸಂತೋಷ್, ಯಶ್, ರಾಜೇಶ್ ಬಂಧಿತ ಆರೋಪಿಗಳು ದುಬೈ ಎಕ್ಸ್ ಚೇಂಜ್ ಹೆಸರಲ್ಲಿ ಬೆಟ್ಟಿಂಗ್ ಕಟ್ಟಿಕೊಂಡು ಆಡುತ್ತಿದ್ದರು. ಸದ್ಯ ಬಂಧಿತರಿಂದ ಹಣ, ಮೊಬೈಲ್, ಲ್ಯಾಪ್ ಟಾಪ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಈ ಸಂಬಂಧ ಜೀವನ್ ಭೀಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment