/newsfirstlive-kannada/media/post_attachments/wp-content/uploads/2024/04/SAI-KISHORE.jpg)
ಐಪಿಎಲ್ 2024ರ 37ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ 3 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟೂರ್ನಿಯ ಮೊದಲ ಪಂದ್ಯದಲ್ಲಿ ಗುಜರಾತ್ ತಂಡವನ್ನು ಪಂಜಾಬ್ ಕಿಂಗ್ಸ್ ಸೋಲಿಸಿತ್ತು. ಇದೀಗ ಹಳೆಯ ಸೋಲಿಗೆ ಗುಜರಾತ್ ಸೇಡು ತೀರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 142 ರನ್ ಗಳಿಸಲಷ್ಟೇ ಶಕ್ತವಾಯಿತು.
ಇದನ್ನೂ ಓದಿ:ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಬೆಂಕಿಯ ಕೆನ್ನಾಲಿಗೆಗೆ 14 ವರ್ಷದ ಬಾಲಕಿ ದಾರುಣ ಸಾವು
ಇದರೊಂದಿಗೆ ಗೆಲುವಿಗೆ 143 ರನ್ಗಳ ಸವಾಲೊಡ್ಡಿತು. ಈ ಟಾರ್ಗೆಟ್ ಬೆನ್ನತ್ತಿದ ಗಿಲ್ ಬಳಗ 7 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿದೆ. ಈ ಗೆಲುವಿನಿಂದ ಗುಜರಾತ್ ಟೈಟಾನ್ಸ್ ಪಾಯಿಂಟ್ಸ್ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ನಿನ್ನೆಯ ಪಂದ್ಯದ ಗೆಲುವಿಗೆ ಸಾಯಿ ಕಿಶೋರ್ ನಾಲ್ಕು ವಿಕೆಟ್ ಕಿತ್ತು ಗೆಲುವಿಗೆ ಪ್ರಮುಖ ಕಾರಣರಾದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ