RCB ವಿರುದ್ಧ ಬಲಿಷ್ಠ ತಂಡ ಕಣಕ್ಕೆ.. ಪ್ಲೇ-ಆಫ್​ನಲ್ಲಿ ಯಾರು, ಯಾರ ಜೊತೆ ಸೆಣಸಾಟ..!

author-image
Ganesh
Updated On
RCB ವಿರುದ್ಧ ಬಲಿಷ್ಠ ತಂಡ ಕಣಕ್ಕೆ.. ಪ್ಲೇ-ಆಫ್​ನಲ್ಲಿ ಯಾರು, ಯಾರ ಜೊತೆ ಸೆಣಸಾಟ..!
Advertisment
  • ಗೆದ್ದ ಈ ತಂಡಕ್ಕೆ ನೇರವಾಗಿ ಫೈನಲ್ ಟಿಕೆಟ್ ಸಿಗಲಿದೆ​..!
  • ಆರ್​ಸಿಬಿ ಫೈನಲ್​ಗೆ ಹೋಗಬೇಕು ಅಂದ್ರೆ ಏನ್ಮಾಡಬೇಕು?
  • ಆರ್​ಸಿಬಿ ಪಂದ್ಯ ಯಾವಾಗ ನಡೆಯುತ್ತದೆ ಗೊತ್ತಾ?

IPL 2024ರ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿತ್ತು. ಮಳೆಯಿಂದಾಗಿ ಎರಡೂ ತಂಡಗಳು ತಲಾ ಒಂದೊಂದು ಅಂಕ ಗಳಿಸಿದವು. ಪಾಯಿಂಟ್ ಪಟ್ಟಿಯಲ್ಲಿ ರಾಜಸ್ಥಾನ ಮೂರನೇ ಸ್ಥಾನದಲ್ಲಿ ಉಳಿದುಕೊಂಡಿತು. ಎಲಿಮಿನೇಟರ್ ಪಂದ್ಯದಲ್ಲಿ ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ್ತಾ, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಕೋಲ್ಕತ್ತಾಗೆ ಹೈದರಾಬಾದ್ ಸವಾಲ್..!
ಅಂಕಪಟ್ಟಿಯಲ್ಲಿ ಕೆಕೆಆರ್ ಅಗ್ರಸ್ಥಾನ ಕಾಯ್ದುಕೊಂಡಿದೆ. ಅದು 14 ಪಂದ್ಯಗಳನ್ನು ಆಡಿದ್ದು, 9 ಪಂದ್ಯದಲ್ಲಿ ಗೆಲುವು ಕಂಡಿದೆ. 3 ಪಂದ್ಯಗಳಲ್ಲಿ ಸೋಲು ಅನುಭವಿಸಿರುವ ಕೆಕೆಆರ್ 20 ಅಂಕಗಳನ್ನು ಹೊಂದಿದೆ. ಹೈದರಾಬಾದ್ ಎರಡನೇ ಸ್ಥಾನದಲ್ಲಿದೆ. 14 ಪಂದ್ಯಗಳನ್ನಾಡಿ 8ರಲ್ಲಿ ಗೆದ್ದಿರುವ ಹೈದರಾಬಾದ್ 17 ಅಂಕ ಹೊಂದಿದೆ. ಈ ಎರಡೂ ತಂಡಗಳು ಮೊದಲ ಕ್ವಾಲಿಫೈಯರ್‌ನಲ್ಲಿ ಮುಖಾಮುಖಿಯಾಗಲಿವೆ. ಮೇ 21 ರಂದು (ನಾಳೆ) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿ ಆಗಲಿವೆ. ಇಲ್ಲಿ ಗೆದ್ದವರು ನೇರವಾಗಿ ಫೈನಲ್​ಗೆ ಹೋಗಲಿದ್ದಾರೆ.

ಇದನ್ನೂ ಓದಿ:ಕೇವಲ ಮೂರು ದಿನದಲ್ಲಿ 1 ಲಕ್ಷ ಸಿಗಲಿದೆ.. ನಿಯಮ ಬದಲಿಸಿದೆ EPFO

publive-image

ರಾಜಸ್ಥಾನ ವರ್ಸಸ್ ಬೆಂಗಳೂರು ಫೈಟ್..!
ನಿನ್ನೆ ಮಳೆಯಿಂದ ಪಂದ್ಯ ರದ್ದಾದ ಹಿನ್ನೆಲೆಯಲ್ಲಿ ರಾಜಸ್ಥಾನ ಕೇವಲ ಒಂದು ರನ್ ಗಳಿಸಲು ಸಾಧ್ಯವಾಯ್ತು. ಹೀಗಾಗಿ ಅದು ಮೂರನೇ ಸ್ಥಾನದಲ್ಲಿದೆ. ರಾಜಸ್ಥಾನ ಒಟ್ಟು 14 ಪಂದ್ಯಗಳನ್ನು ಆಡಿದ್ದು 8ರಲ್ಲಿ ಜಯ ಸಾಧಿಸಿದೆ. ಆರ್‌ಸಿಬಿ ನಾಲ್ಕನೇ ಸ್ಥಾನದಲ್ಲಿದೆ. 14 ಪಂದ್ಯಗಳನ್ನಾಡಿ 7 ಪಂದ್ಯಗಳನ್ನು ಗೆದ್ದುಕೊಂಡಿದೆ ಆರ್​ಸಿಬಿ. ಮೇ 22 ರಂದು ರಾಜಸ್ಥಾನ ಮತ್ತು ಬೆಂಗಳೂರು ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಪಂದ್ಯವೂ ಅಹಮದಾಬಾದ್‌ನಲ್ಲಿ ನಡೆಯಲಿದೆ.

ಮೊದಲ ಕ್ವಾಲಿಫೈಯರ್‌ನಲ್ಲಿ ಗೆದ್ದ ತಂಡ ಫೈನಲ್‌ಗೆ..!
ಆರ್‌ಸಿಬಿ ಮತ್ತು ರಾಜಸ್ಥಾನ ನಡುವಿನ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್​ಗೆ ಸ್ಥಾನ ಪಡೆಯಲಿದೆ. ಈ ಪಂದ್ಯದಲ್ಲಿ ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಮೊದಲ ಕ್ವಾಲಿಫೈಯರ್ ನಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ತಲುಪಲಿದೆ. ಸೋತ ತಂಡ ಎರಡನೇ ಕ್ವಾಲಿಫೈಯರ್ ಆಡಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment