/newsfirstlive-kannada/media/post_attachments/wp-content/uploads/2025/04/BHUVI.jpg)
ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದ ಬೆನ್ನಲ್ಲೇ ಆರ್ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಹಿಡಿತ ಸಾಧಿಸಿದೆ. ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದ ಬೆಂಗಳೂರು ತಂಡ ಮತ್ತೆ ಮೂರನೇ ಸ್ಥಾನಕ್ಕೆ ಜಿಗಿದಿದೆ.
ಏಪ್ರಿಲ್ 23 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿತ್ತು. ಪರಿಣಾಮ ಆರ್ಸಿಬಿ ನಾಲ್ಕನೇ ಸ್ಥಾನದಲ್ಲಿತ್ತು. ನಿನ್ನೆಯ ಪಂದ್ಯ ಗೆಲ್ಲುತ್ತಿದ್ದಂತೆಯೇ ಮತ್ತೆ ಮೂರನೇ ಸ್ಥಾನ ಅಲಂಕರಿಸಿದೆ.
ಇದನ್ನೂ ಓದಿ: 22 ರನ್ ನೀಡಿದ ಭುವಿ.. ಕೈತಪ್ಪಿ ಹೋಗಿದ್ದ ಪಂದ್ಯಕ್ಕೆ ಹೇಜಲ್ವುಡ್ ತಿರುವು ಕೊಟ್ಟ ರೋಚಕತೆ ಹೇಗಿತ್ತು..?
9 ಪಂದ್ಯಗಳನ್ನು ಆಡಿರುವ ಆರ್ಸಿಬಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿ, 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನು, ಗುಜರಾತ್ ಟೈಟನ್ಸ್ 8 ಪಂದ್ಯಗಳಲ್ಲಿ 6 ಮ್ಯಾಚ್ ಗೆದ್ದು ನೆಟ್ ರನ್ರೇಟ್ ಆಧಾರದ ಮೇಲೆ ಮೊದಲ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ಎರಡನೇ ಸ್ಥಾನದಲ್ಲಿದೆ.
ಇನ್ನು, ಮುಂಬೈ ಇಂಡಿಯನ್ಸ್ ನಾಲ್ಕು, ಪಂಜಾಬ್ ಕಿಂಗ್ಸ್ ಐದು, ಎಲ್ಎಸ್ಜಿ ಆರನೇ ಸ್ಥಾನದಲ್ಲಿವೆ. 7ನೇ ಸ್ಥಾನದಲ್ಲಿ ಕೆಕೆಆರ್, 8ನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ಇದೆ. ಸನ್ ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಕ್ರಮವಾಗಿ 9, 10ನೇ ಸ್ಥಾನವನ್ನು ಹಂಚಿಕೊಂಡಿವೆ.
ಇದನ್ನೂ ಓದಿ: ನಿನ್ನೆಯೂ ಕೋಪಿಸಿಕೊಂಡ ವಿರಾಟ್ ಕೊಹ್ಲಿ.. ಕೈಮುಗಿದು ಆಕ್ರೋಶ ವ್ಯಕ್ತಪಡಿಸಿದ್ದು ಯಾರಿಗೆ?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ 'ರನ್ ಭೂಮಿ' ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್