/newsfirstlive-kannada/media/post_attachments/wp-content/uploads/2025/04/VIRAT_KOHLI_RCB_TOSS.jpg)
ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ತಂಡವನ್ನು 12 ರನ್ಗಳಿಂದ ಸೋಲಿಸಿದೆ. ಆ ಮೂಲಕ ಆರ್ಸಿಬಿ, ಇಲ್ಲಿಯವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದುಕೊಂಡಿದೆ.
ಪಾಯಿಂಟ್ಸ್ ಪಟ್ಟಿ ಏನಾಯ್ತು..?
ಮೂರನೇ ಪಂದ್ಯ ಗೆದ್ದರೂ ಪಾಯಿಂಟ್ಸ್ ಪಟ್ಟಿಯಲ್ಲಿ ಅಷ್ಟೊಂದು ಏರಿಳಿತ ಆಗಿಲ್ಲ. ಆರ್ಸಿಬಿ ಮೂರನೇ ಸ್ಥಾನದಲ್ಲೇ ಇದೆ. ಇನ್ನು ಮುಂಬೈ ಇಂಡಿಯನ್ಸ್ 8ನೇ ಸ್ಥಾನಕ್ಕೆ ಕುಸಿದಿದೆ. ಗೆಲುವಿನ ರೇಟ್ ಹೆಚ್ಚಿಸಿಕೊಂಡಿರುವ ಆರ್ಸಿಬಿ, 6 ಪಾಯಿಂಟ್ಸ್ ಪಡೆದುಕೊಂಡಿದೆ.
ಆಡಿರುವ ಮೂರೂ ಪಂದ್ಯಗಳನ್ನು ಗೆದ್ದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ನೆಟ್ ರನ್ರೇಟ್ ಆಧಾರದ ಮೇಲೆ ಮೊದಲ ಸ್ಥಾನದಲ್ಲಿದ್ದರೆ, ನಾಲ್ಕರಲ್ಲಿ ಮೂರರಲ್ಲಿ ಗೆದ್ದಿರುವ ಗುಜರಾತ್ ಟೈಟನ್ಸ್ ಎರಡನೇ ಸ್ಥಾನದಲ್ಲಿದೆ. ಇನ್ನು ಪಂಜಾಬ್ ಮತ್ತು ಕೆಕೆ ಆರ್ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನವನ್ನು ಹಂಚಿಕೊಂಡಿವೆ. ಸನ್ ರೈಸರ್ಸ್ ಹೈದ್ರಾಬಾದ್ ಕೊನೆಯ ಸ್ಥಾನದಲ್ಲಿದ್ದು, ಸಿಎಸ್ಕೆ 9ನೇ ಸ್ಥಾನದಲ್ಲಿದೆ. ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಕ್ರಮವಾಗಿ ಏಳು ಮತ್ತು 8 ನೇ ಸ್ಥಾನದಲ್ಲಿವೆ.
ಇದನ್ನೂ ಓದಿ: ಪಾಂಡ್ಯಗೆ ಮತ್ತೊಂದು ಸೋಲಿನ ನೋವು.. ಸೋತ ಬೆನ್ನಲ್ಲೇ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ