newsfirstkannada.com

×

ಹಮಾಸ್​​​​​ ನಾಯಕರ ಹತ್ಯೆಗೆ ಪ್ರತಿಕಾರ; ಇಸ್ರೇಲ್​ ಮೇಲೆ 100 ಕ್ಷಿಪಣಿಗಳಿಂದ ಇರಾನ್ ಭಯಾನಕ​ ದಾಳಿ

Share :

Published October 1, 2024 at 11:27pm

Update October 1, 2024 at 11:30pm

    ಇಂದು ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಶುರು

    ಇಸ್ರೇಲ್ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಇರಾನ್​​

    100ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಲಾಗಿದೆ..!

ಇಸ್ರೇಲ್: ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ ಜೋರಾಗಿದೆ. ಇಂದು ಇಸ್ರೇಲ್ ಮೇಲೆ ಇರಾನ್ ಭೀಕರ ದಾಳಿ ನಡೆಸಿದ್ದು, ಯುದ್ಧ ಭೀತಿ ನಿರ್ಮಾಣವಾಗಿದೆ.

ಇನ್ನು, ಇರಾನ್​ ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ. ತನ್ನ ದೇಶದ ಪ್ರಮುಖ ನಗರಗಳಾದ ಇಸ್ಫಹಾನ್, ತಬ್ರಿಜ್, ಖೋರಮಾಬಾದ್​​ನಿಂದ ಇಸ್ರೇಲ್‌ ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ. ಹಮಾಸ್ ನಾಯಕರ ಹತ್ಯೆಗೆ ಪ್ರತಿಕಾರವಾಗಿ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ನಿರ್ಧಾರವನ್ನು ಇರಾನ್‌ ಮಾಡಿತ್ತು. ಇರಾನ್​ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ನಿರ್ಧಾರದ ಬಳಿಕ ನಡೆದ ಮೊದಲ ದಾಳಿ ಇದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಸೈಟ್​ ವಾಪಸ್​ ಮಾಡಿದ್ರೂ ಸಿಎಂ ಸಿದ್ದರಾಮಯ್ಯಗೆ ತಪ್ಪದ ಸಂಕಷ್ಟ; ಮುಂದೇನು?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಮಾಸ್​​​​​ ನಾಯಕರ ಹತ್ಯೆಗೆ ಪ್ರತಿಕಾರ; ಇಸ್ರೇಲ್​ ಮೇಲೆ 100 ಕ್ಷಿಪಣಿಗಳಿಂದ ಇರಾನ್ ಭಯಾನಕ​ ದಾಳಿ

https://newsfirstlive.com/wp-content/uploads/2024/10/Iran-Israel-war.jpg

Load More