newsfirstkannada.com

RAIN Alert: ಬೆಂಗಳೂರಲ್ಲಿ ಕೂಲ್, ಕೂಲ್ ವೆದರ್‌.. ಇವತ್ತು ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಾ?

Share :

04-09-2023

  ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆ ನಿರೀಕ್ಷೆ

  ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

  ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ ರೈತರಿಗೆ ಆತಂಕ

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಕೈಕೊಟ್ಟಿದ್ದ ವರುಣ ಸೆಪ್ಟೆಂಬರ್‌ನಲ್ಲಿ ಕೃಪೆ ತೋರುವ ಲಕ್ಷಣಗಳಿವೆ. ಸಿಲಿಕಾನ್ ಸಿಟಿಯಲ್ಲಿ ಇಂದು ಕೂಲ್, ಕೂಲ್ ವೆದರ್ ಇದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಕೈ ಕೊಟ್ಟ ಮಳೆರಾಯ, ಭೀಕರ ಬರಗಾಲದ ಭಯ; ಇವತ್ತು ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲೂ ಇಂದು ಮೋಡ ಕವಿದ ವಾತಾವರಣವಿದೆ. ಬೆಂಗಳೂರಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಇರಲಿದೆ.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ನಿನ್ನೆಯಷ್ಟೇ ಧಾರಾಕಾರ ಮಳೆ ಸುರಿದಿದೆ. ಕಲಬುರಗಿ, ಬೀದರ್, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ರಾತ್ರಿಯಿಡೀ ಉತ್ತಮ ಮಳೆಯಾಗಿದೆ. ಆಗಸ್ಟ್‌ನಲ್ಲಿ ಮುಂಗಾರು ಕೈ ಕೊಟ್ಟಿದ್ದರಿಂದ ರಾಜ್ಯದ ರೈತರು ಕಂಗಾಲಾಗಿದ್ದರು. ಇಂತಹ ಸಂದರ್ಭದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕಟಾವಿಗೆ ಸಿದ್ಧವಾಗಿರುವ ಹಸಿರು ಕಾಳು ಮತ್ತು ಉದ್ದಿನಬೇಳೆ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

RAIN Alert: ಬೆಂಗಳೂರಲ್ಲಿ ಕೂಲ್, ಕೂಲ್ ವೆದರ್‌.. ಇವತ್ತು ರಾಜ್ಯದಲ್ಲಿ ಧಾರಾಕಾರ ಮಳೆ ಸುರಿಯುತ್ತಾ?

https://newsfirstlive.com/wp-content/uploads/2023/09/Rain-4.jpg

Load More