/newsfirstlive-kannada/media/post_attachments/wp-content/uploads/2024/12/NANDINI.jpg)
ಹೊಸ ವರ್ಷಕ್ಕೆ ಸರ್ಕಾರದಿಂದ ರಾಜ್ಯದ ಜನರಿಗೆ ಶಾಕ್​ ಕೊಡಲು ಸಜ್ಜಾಗಿದೆ ಅನ್ನೋ ಮಾಹಿತಿಗಳು ಸದ್ಯ ಆಚೆ ಬರುತ್ತಿವೆ. ನಂದಿನಿ ಹಾಲಿನ ದರ ಏರಿಕೆ ಮಾಡಲು ಸದ್ಯ ಸರ್ಕಾರ ಚಿಂತನೆ ನಡೆಸಿದೆ. ನಂದಿನಿ ಹಾಲು ಪ್ರತಿ ಲೀಟರ್​ಗೆ ಒಂದಲ್ಲ, ಎರಡಲ್ಲ ಬರೋಬ್ಬರಿ 5 ರೂಪಾಯಿ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಇಂತಹದೊಂದು ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಬಂದಿದ್ದು. ಚಳಿಗಾಲದ ಅಧಿವೇಶನದ ಬಳಿಕ ದರ ಏರಿಕೆ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ.
ಈಗಾಗಲೇ ಹೇಳಿದಂತೆ ಹಾಲಿನ ದರ ಏರಿಕೆಗೆ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಸದ್ಯ ಡಿಸೆಂಬರ್ 19ರವರೆಗೂ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿದ್ದು ಅಧಿವೇಶನದ ಬಳಿಕ ಕನ್ನಡ ಸಾಹಿತ್ಯ ಸಮ್ಮೇಳನವಿದೆ. ಡಿಸೆಂಬರ್ 20 ರಿಂದ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಳ್ಳಲಿದೆ. ಸಮ್ಮೇಳನಕ್ಕೆ ಚಾಲನೆ ನೀಡಿದ ಬಳಿಕ ಕೆಎಂಎಫ್ ಅಧಿಕಾರಿಗಳ ಜೊತೆ ಸಿಎಂ ಡಿಸೆಂಬರ್ 21 ಅಥವಾ 22 ರಂದು ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹಾಲಿನ ದರ ಏರಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.
ಒಂದು ವೇಳೆ ಅಂದಕೊಂಡಂತೆಯೇ ಆದಲ್ಲಿ ಜನವರಿ 1 ರಿಂದ ನೂತನ ದರ ಜಾರಿಗೆ ಬರೋದು ನಿಶ್ಚಿತವಾಗಿದೆ. ಆಗ ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 5 ರೂಪಾಯಿ ಏರಿಕೆಯಾಗಲಿದೆ. ಈಗಾಗಲೇ ಶ್ರೀಸಾಮಾನ್ಯ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದಾನೆ. ಈಗ ಹಾಲಿನ ದರದಲ್ಲಿಯೂ ಏರಿಕೆಯಾಗಿದ್ದೆ ಆದಲ್ಲಿ ಈಗಾಗಲೇ ಬಿದ್ದ ಬೆಲೆ ಏರಿಕೆಯ ಬರೆಯ ಮೇಲೆ ಉಪ್ಪು ಸವರಿದಂತಾಗುವುದು ನಿಶ್ಚಿತ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us