newsfirstkannada.com

ಭೂ ಮಾಫಿಯಾಗೆ ಬಲಿಯಾದ್ರಾ ಪ್ರತಿಮಾ? ಶಾಸಕರೊಬ್ಬರ ವಿರುದ್ಧ FIR ದಾಖಲಿಸಿದ್ರಂತೆ ಈ ನಿಷ್ಠಾವಂತ ಅಧಿಕಾರಿ

Share :

06-11-2023

    ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪ್ರತಿಮಾ ಕೊಲೆ ಪ್ರಕರಣ

    ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಕೊಲೆಯ ಸುತ್ತ ಅನುಮಾನದ ಹುತ್ತ

    ಅಕ್ರಮ ಗಣಿಗಾರಿಗೆ ಹಿನ್ನೆಲೆ ಕೇಸ್​ ದಾಖಲಿಸಿದ್ದಕ್ಕೆ ಪ್ರತಿಮಾ ಬಲಿಯಾದ್ರಾ?

ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನಿಷ್ಠಾವಂತ ಅಧಿಕಾರಿಯ ಸಾವಿಗೆ ಕಾರಣ ಯಾರು? ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಅತ್ತ ಪೊಲೀಸರು ಸಹ ಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ. 3 ತಂಡ ರಚನೆ ಮಾಡಿ ಹುಡುಕಾಡುತ್ತಿದ್ದಾರೆ. ಹೀಗಿರುವಾಗ ಪ್ರತಿಮಾ ಭೂ ಮಾಫಿಯಾಗೆ ಬಲಿಯಾದ್ರಾ ಎಂಬ ಸುದ್ದಿ ಹರಿದಾಡುತ್ತಿದೆ.

ಖಡಕ್​ ಅಧಿಕಾರಿಯಾಗಿದ್ದ ಪ್ರತಿಮಾ ಹುಣಸಮಾರನಹಳ್ಳಿ ಮತ್ತು ಸೊಣ್ಣಪ್ಪನಹಳ್ಳಿ ಎಂಬ ಗ್ರಾಮದಲ್ಲಿ ಭೂ ಸರ್ವೆ ಮಾಡಿದ್ದರು. 4 ಎಕರೆ 5 ಗುಂಟೆ ಜಮೀನಿನಲ್ಲಿ ಅಕ್ರಮ ಗಣಿಗಾರಿಗೆ ಮಾಡಿ 25 ಲಕ್ಷ ನಷ್ಟ ಉಂಟಾಗಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಪ್ರತಿಮಾ ವರದಿಯನ್ನು ಸಹ‌‌ ಮಾಡಿದ್ದರು.

ಅಕ್ರಮ ಗಣಿಗಾರಿಕೆ ಮಾಡಿದ‌ ಹಿನ್ನಲೆ ಶಾಸಕೊಬ್ಬರು ಸೇರಿದಂತೆ ನಾಲ್ಕು ಜನರ‌ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಕ್ರಮದ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸಿದ್ದರು. ಈ ವಿಚಾರಗಳ ಬಗ್ಗೆ ಶಾಸಕರೊಬ್ಬರು ಸೇರಿದಂತೆ ಇಬ್ಬರ ವಿರುದ್ಧ ದೇವನಹಳ್ಳಿಯ ಜೆಎಂಎಫ್​​​ಸಿಯಲ್ಲಿ ಮೊಕದ್ದಮೆ ಹೂಡಿದ್ದರು.

ಈ ಪ್ರಕರಣದಲ್ಲಿ ಪ್ರತಿಮಾ ಅವರು ನೀಡಿದ ಸ್ಥಳ ಪರಿಶೀಲನೆ ಪ್ರತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೆ ಎನ್ನಲಾಗಿದೆ. ಈ ಎಲ್ಲಾ ಅಕ್ರಮದ ಬಗ್ಗೆ‌ ಪ್ರತಿಮಾ ಸರ್ಕಾರಕ್ಕೆ ವರದಿ ನೀಡಿದ್ದು, ಇದೇ‌ ಕಾರಣಕ್ಕೆ ಪ್ರತಿಮಾರನ್ನು ಕೊಲೆ ಮಾಡಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಹಾಗಾಗಿ ಪೊಲೀಸರು ಈ ಆಯಾಮದಲ್ಲಿಯು ಸಹ‌‌ ತನಿಖೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೂ ಮಾಫಿಯಾಗೆ ಬಲಿಯಾದ್ರಾ ಪ್ರತಿಮಾ? ಶಾಸಕರೊಬ್ಬರ ವಿರುದ್ಧ FIR ದಾಖಲಿಸಿದ್ರಂತೆ ಈ ನಿಷ್ಠಾವಂತ ಅಧಿಕಾರಿ

https://newsfirstlive.com/wp-content/uploads/2023/11/Prathima-3.jpg

Load More