newsfirstkannada.com

ಇಂದು ರಾತ್ರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಎಲ್ಲೆಲ್ಲಿ ಗೊತ್ತಾ?

Share :

Published April 23, 2024 at 7:11pm

  ಇಂದು ರಾತ್ರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ

  ರಾಜ್ಯದ ಜನತೆಗೆ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

  ಇಷ್ಟೇ ಅಲ್ಲ ರಾಜಧಾನಿ ಬೆಂಗಳೂರಲ್ಲಿ ಕೆಲವೆಡೆ ಸಾಧಾರಣ ಮಳೆ!

ಬೆಂಗಳೂರು: ಇಂದು ರಾತ್ರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ, ದಾವಣಗೆರೆ, ಹುಬ್ಬಳ್ಳಿ, ಹಾವೇರಿ, ವಿಜಯಪುರ, ವಿಜಯನಗರ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇಷ್ಟೇ ಅಲ್ಲ ರಾಜಧಾನಿ ಬೆಂಗಳೂರಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಬಿಸಿಲಿನ ಬೇಗೆಯಿಂದ ಬೇಸತ್ತ ಜನರಿಗೆ ಇಳೆ ತಂಪಾಗಲಿದೆ. ಮುಂದಿನ ವಾರ ಮಾತ್ರ ಬೆಂಗಳೂರಲ್ಲಿ ಭರ್ಜರಿ ಮಳೆಯಾಗೋ ಲಕ್ಷಣ ಗೋಚರಿಸುತ್ತಿದೆ. ಹಾಗಾಗಿ ಮತ್ತೆ ಉಷ್ಣಾಂಶ ಗರಿಷ್ಠ ಮಟ್ಟ ತಲುಪಿದೆ ಎಂದು ವರದಿಯಾಗಿದೆ.

ಇಂದು ಬೆಂಗಳೂರಿನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇದು ಏಪ್ರಿಲ್ ತಿಂಗಳಲ್ಲಿ 8ನೇ ಬಾರಿಗೆ 37 ಡಿಗ್ರಿ ಸೆಲ್ಸಿಯಸ್‍ ಮೀರಿ ಉಷ್ಣಾಂಶ ದಾಖಲಾಗಿರುವುದು. ಜತೆಗೆ ಈ ಗರಿಷ್ಠ ಉಷ್ಣಾಂಶ ವಾರ ಇಡೀ ದಾಖಲಾಗೋ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂ ತೀರ್ಪಿನ ಬೆನ್ನಲ್ಲೇ ಹೋರಾಟಕ್ಕೆ ಸಜ್ಜು.. ಮೋದಿ ಸರ್ಕಾರದ ವಿರುದ್ಧ ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್​ ಸಮರ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಂದು ರಾತ್ರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಎಲ್ಲೆಲ್ಲಿ ಗೊತ್ತಾ?

https://newsfirstlive.com/wp-content/uploads/2024/04/CKD_RAIN_1.jpg

Load More