newsfirstkannada.com

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ; JDS-BJP ಮೈತ್ರಿ ಬಗ್ಗೆ ಜಗದೀಶ್ ಶೆಟ್ಟರ್ ವ್ಯಂಗ್ಯ

Share :

08-09-2023

    ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಬಿಜೆಪಿಯೂ ವೀಕ್ ಆಗಿದೆ

    ಇವತ್ತು ಟೀಕೆ, ನಾಳೆ ಮೈತ್ರಿ ಮಾಡಿಕೊಳ್ಳೋದರಲ್ಲಿ ಏನರ್ಥವಿದೆ

    ಕರ್ನಾಟಕದಲ್ಲಿ ಬಿಜೆಪಿಗೆ ಹೆದರಿಕೆ ಶುರುವಾಗಿದೆ ಎಂದ ಜಗದೀಶ್​ ಶೆಟ್ಟರ್​

ಹುಬ್ಬಳ್ಳಿ: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡ್ಕೊತ್ತೇವೆ ಅಂದ್ರು. ನಂತರ ಅದಕ್ಕೆ ಬ್ರೇಕ್ ಆಯ್ತು. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ ಎಂದು ಹೇಳುವ ವ್ಯಂಗ್ಯ ನುಡಿದ್ದಾರೆ.

ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ

ನಂತರ ಮಾತು ಮುಂದುವರಿಸಿದ ಜಗದೀಶ್ ಶೆಟ್ಟರ್, ಅನುಕೂಲವಿದ್ದಾಗ ಮೈತ್ರಿ ಮಾಡಿಕೊಳ್ಳುವುದು, ಅನಾನುಕೂಲವಾದಾಗ ಮೈತ್ರಿಯಿಂದ ಹಿಂದೆ ಸರಿಯೋದು. ಈ ರೀತಿ ಮಾಡಿದಾಗ ಜನರ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ. ಜೊತೆಗೆ ಆಯಾ ಪಕ್ಷಗಳ ಕ್ರೆಡಿಬಿಲಿಟಿ ಸಹ ಹೋಗುತ್ತೆ ಎಂದಿದ್ದಾರೆ.

ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ

ಮೈತ್ರಿ ವಿಚಾರದಲ್ಲಿ ಬಿಜೆಪಿ ಯಾವಾಗಲೂ ದ್ವಂದ್ವ ನಿಲುವು ಅನುಸರಿಸುತ್ತೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಆರೋಪ ಮಾಡಿದರು. ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು.

ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ. ಮೈತ್ರಿ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು. ಆದರೆ ಬಿಜೆಪಿಯವರು ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದಿದ್ದಾರೆ.

ಬಿಜೆಪಿ ನಾಯಕರು ಕಾಂಗ್ರೆಸ್​​ನತ್ತ ಮುಖಮಾಡಿದ್ದಾರೆ

ಉಡುಪಿಯ ಬೈಂದುರ್ ಶಾಸಕ ಸುಕುಮಾರ್ ಶೆಟ್ಟಿ ಕಾಂಗ್ರೆಸ್ ಸೇರ್ಪಡೆ ಆಗ್ತಿದ್ದಾರೆ. ಹೀಗಾಗಿ ಬಿಜೆಪಿಯವರು ಮೊದಲು ತಮ್ಮಲ್ಲಿ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳಲಿ. ಕರ್ನಾಟಕದಲ್ಲಿ ಕಾಂಗ್ರೆಸ್ ದಿನದಿಂದ ದಿನಕ್ಕೆ ಮೇಲೆ ಏರುತ್ತಾ ಇದೆ. ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್​​ನತ್ತ ಮುಖಮಾಡಿದ್ದಾರೆ. ಕರ್ನಾಟಕ ಬಿಜೆಪಿಗೆ ಹೆದರಿಕೆ ಶುರುವಾಗಿದೆ. ಇಡೀ ದೇಶದಲ್ಲಿಯೂ ಬಿಜೆಪಿಗೆ ಇದೇ ಸ್ಥಿತಿ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ನಂಬರ್ ಟು ಸ್ಥಾನದಲ್ಲಿದೆ. ಚುನಾವಣೆ ಬರೋ ವೇಳೆಗೆ ನಂಬರ್ ಒನ್ ಸ್ಥಾನಕ್ಕೆ ಬಂದರೂ ಅಚ್ಚರಿ ಇಲ್ಲ ಎಂದು ಜಗದೀಶ್​ ಶೆಟ್ಟರ್​​ ಹೇಳಿದ್ದಾರೆ.

ಯಾವಾಗಲೂ ಅಸಹಾಯಕರು ಇಬ್ಬರು ಒಂದಾಗ್ತಾರೆ. ರಾಜ್ಯದಲ್ಲಿ ಜೆಡಿಎಸ್ ವೀಕ್ ಆಗಿದೆ ಜೊತೆಗೆ ಬಿಜೆಪಿಯೂ ವೀಕ್ ಆಗಿದೆ. ಹಾಗಾಗಿ ಇಬ್ಬರಿಗೂ ಮೈತ್ರಿ ಅನಿವಾರ್ಯ. ಲೋಕಸಭಾ ಚುನಾವಣೆ ವೇಳೆಗೆ ದೊಡ್ಡಮಟ್ಟದಲ್ಲಿ ರಾಜಕೀಯ ಧೃವಿಕರಣ ಆಗುತ್ತೆ. ಬಹಳ ಜನ ಬೇಜಾರ್ ನಲ್ಲಿದ್ದಾರೆ. ಬರುವ ದಿನಗಳಲ್ಲಿ ಪಕ್ಷಾಂತರ ಮತ್ತಷ್ಟು ಹೆಚ್ಚಾಗುತ್ತೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ; JDS-BJP ಮೈತ್ರಿ ಬಗ್ಗೆ ಜಗದೀಶ್ ಶೆಟ್ಟರ್ ವ್ಯಂಗ್ಯ

https://newsfirstlive.com/wp-content/uploads/2023/09/Jagadish-Shettar.jpg

Load More