ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನಕರ್

author-image
Bheemappa
Updated On
ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನಕರ್
Advertisment
  • ಪ್ರಧಾನಿ ಹಾಗೂ ರಾಷ್ಟ್ರಪತಿಗಳು, ಸಂಸತ್ತಿನ ಸದಸ್ಯರನ್ನ ಸ್ಮರಿಸಿದರು
  • ಯಾವ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದರು?
  • ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ

ನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆರೋಗ್ಯ ಸಮಸ್ಯೆ ಕಾರಣ ನೀಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಭಾರತದ ರಾಷ್ಟ್ರಪತಿ ಆಗಿರುವ ದ್ರೌಪದಿ ಮುರ್ಮು ಅವರಿಗೆ ಜಗದೀಪ್ ಧನಕರ್ ಅವರು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಜಗದೀಪ್ ಧನಕರ್ ಅವರು ಭಾರತದ 14ನೇ ಉಪರಾಷ್ಟ್ರಪತಿಯಾಗಿ 2022 ರಿಂದ 2025ರ ಜುಲೈ 21ರವರೆಗೆ ಕಾರ್ಯನಿರ್ವಹಿಸಿದ್ದಾರೆ. ಆದರೆ ಅವರ ಆರೋಗ್ಯದ ಸಮಸ್ಯೆಗಳು ಇದ್ದಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಸಂವಿಧಾನದ 67(a) ವಿಧಿಯಂತೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಆರೋಗ್ಯ ಕಾಳಜಿ ಮತ್ತು ವೈದ್ಯಕೀಯ ಸಲಹೆ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಜಸ್​ಪ್ರಿತ್ ಬೂಮ್ರಾಗೆ ಮತ್ತೆ ವಿಶ್ರಾಂತಿನಾ.. ಮೊಹಮ್ಮದ್​ ಸಿರಾಜ್ ಯಾರ ಕಣ್ಣಿಗೂ ಕಾಣಿಸ್ತಿಲ್ವಾ?

publive-image

ಉಪರಾಷ್ಟ್ರಪತಿ ಆಗುವುದಕ್ಕೂ ಮೊದಲು ಜಗದೀಪ್ ಧನಕರ್ ಅವರು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಚಂದ್ರಶೇಖರ್ ಸಚಿವ ಸಂಪುಟದಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಇದೆ. ಸದ್ಯ ಜಗದೀಪ್ ಧನಕರ್ ಅವರಿಗೆ 74 ವರ್ಷಗಳು ಆಗಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ಮರಿಸಿದ್ದಾರೆ.

ಉಳಿದಂತೆ ಸಂಸತ್ತಿನ ಸದಸ್ಯರಿಂದ ಸಿಕ್ಕಂತಹ ಸಹಕಾರ ಮತ್ತು ಪ್ರೀತಿಯನ್ನು ನೆನಪಿಸಿಕೊಂಡಿದ್ದಾರೆ. ನಾನು ಅಧಿಕಾರಾವಧಿಯಲ್ಲಿ ಇದ್ದಾಗ ಸಾಕಷ್ಟು ಕಲಿತಿದ್ದೇನೆ. ಭಾರತದ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದು ಪತ್ರದ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇವರು ಮೂಲತಹ ರಾಜಸ್ಥಾನದವರು ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment