newsfirstkannada.com

BREAKING: ಮರಳಿ ಗೂಡು ಸೇರಿದ ಜಗದೀಶ್ ಶೆಟ್ಟರ್‌.. ದೆಹಲಿಯಲ್ಲಿ ಬಿ.ಎಸ್‌ ಯಡಿಯೂರಪ್ಪ ಸ್ವಾಗತ

Share :

Published January 25, 2024 at 1:14pm

Update January 25, 2024 at 1:22pm

    ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್

    ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷ ಸೇರ್ಪಡೆ

    ಪಕ್ಷಕ್ಕೆ ಬರಮಾಡಿಕೊಂಡ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ

ನವದೆಹಲಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭೂಪೇಂದ್ರ ಯಾದವ್ ಸಮಕ್ಷಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ.

ಇದನ್ನೂ ಓದಿ: BREAKING: ಆಪರೇಷನ್ ಜಗದೀಶ್ ಶೆಟ್ಟರ್ ಸಕ್ಸಸ್; ಕಾಂಗ್ರೆಸ್‌ನ ಮೊದಲ ವಿಕೆಟ್ ಪತನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿರುವ ಜಗದೀಶ್ ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದಾರೆ. ದೆಹಲಿಯಿಂದಲೇ ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಕರೆ ಮಾಡಿರುವ ಶೆಟ್ಟರ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಇ-ಮೇಲ್ ಮೂಲಕ ಬೇಡ ನೇರವಾಗಿ ಬಂದು ರಾಜೀನಾಮೆ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸೂಚಿಸಿದ್ದಾರೆ. ದೆಹಲಿಯಿಂದ ಖುದ್ದಾಗಿ ಬಂದು ಶೆಟ್ಟರ್ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಮರಳಿ ಗೂಡು ಸೇರಿದ ಜಗದೀಶ್ ಶೆಟ್ಟರ್‌.. ದೆಹಲಿಯಲ್ಲಿ ಬಿ.ಎಸ್‌ ಯಡಿಯೂರಪ್ಪ ಸ್ವಾಗತ

https://newsfirstlive.com/wp-content/uploads/2024/01/Shettar-Bjp-Join.jpg

Load More